Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ನವದೆಹಲಿ: ಭಾನುವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ

0

ನವದೆಹಲಿ: ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹಿರಿಯ ನಾಯಕರೊಂದಿಗೆ ಇಂದು (ಗುರುವಾರ) ಸಮಾಲೋಚನೆ ನಡೆಸಲಿದ್ದಾರೆ.

ವರಿಷ್ಠರ ಒಪ್ಪಿಗೆ ಪಡೆದು ಭಾನುವಾರದೊಳಗೆ ಸಂಪುಟ ವಿಸ್ತರಣೆ ಮಾಡಲು ಉಭಯ ನಾಯಕರು ಉದ್ದೇಶಿಸಿದ್ದಾರೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಜತೆ ಎಂಟು ಶಾಸಕರು ಸಂಪುಟ ದರ್ಜೆಯ ಸಚಿವರಾಗಿ ಕಳೆದ ಶನಿವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.ಮೊದಲ ಹಂತದಲ್ಲಿ 25 ಸಚಿವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಯೋಜಿಸಲಾಗಿತ್ತು. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವಿನ ಭಿನ್ನಾಭಿಪ್ರಾಯದ ಕಾರಣಕ್ಕೆ ಎಂಟು ಮಂದಿ ಮಾತ್ರ ಸಂಪುಟ ಸೇರಿದ್ದರು. ಈ ಸಚಿವರಿಗೆ ಇನ್ನೂ ಖಾತೆಗಳ ಹಂಚಿಕೆ ಆಗಿಲ್ಲ. ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಅವರು ಪ್ರತ್ಯೇಕವಾಗಿ ನವದೆಹಲಿಗೆ ಬುಧವಾರ ಬಂದಿದ್ದಾರೆ. ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರೊಂದಿಗೆ ಇಂದು ಚರ್ಚೆ ನಡೆಸಲಿದ್ದಾರೆ.

ಬೆಳ್ತಂಗಡಿ: ಕಾರು-ಬೈಕ್‌ ಅಪಘಾತ; ಗಾಯಾಳು ಕೆಎಸ್ ಆರ್ ಟಿಸಿ ಚಾಲಕ ಸಾವು

ನಂತರ, ಉಭಯ ನಾಯಕರು ಖರ್ಗೆ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ‘ಮುಖ್ಯಮಂತ್ರಿ ಸೇರಿ ಒಟ್ಟು 34 ಸದಸ್ಯರಿಗೆ ಸಂಪುಟದಲ್ಲಿ ಅವಕಾಶವಿದೆ. ಸಂಪುಟಕ್ಕೆ ಮತ್ತೆ 20 ಮಂದಿಯನ್ನು ಸೇರಿಸಿಕೊಳ್ಳಲು ಉದ್ದೇಶಿಸಲಾಗಿದೆ. ಅತೃಪ್ತರನ್ನು ಸಮಾಧಾನಪಡಿಸಲು ನಾಲ್ಕು ಸ್ಥಾನಗಳನ್ನು ಖಾಲಿ ಬಿಡಲಾಗುವುದು’ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

Leave A Reply

Your email address will not be published.