Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

‘ನಾನು ಕಾಂಗ್ರೆಸ್ ಸೇರುತ್ತೇನೆ ಅಂತಾ ಎಲ್ಲಿಯೂ ಹೇಳಿಲ್ಲ’- ರೇಣುಕಾಚಾರ್ಯ

0

ಬೆಂಗಳೂರು: ರಾಜಕೀಯವೇ ಬೇರೆ, ಪರಸ್ಪರ ವಿಶ್ವಾಸವೇ ಬೇರೆ. ಅವರೂ ನನ್ನನ್ನು ಪಕ್ಷ ಸೇರ್ಪಡೆ ಆಗುವಂತೆ ಆಹ್ವಾನ ನೀಡಿಲ್ಲ. ನಾನು ಕೂಡ ಕಾಂಗ್ರೆಸ್ ಸೇರುತ್ತೇನೆ ಅಂತಾ ಎಲ್ಲಿಯೂ ಹೇಳಿಲ್ಲ ಎಂದು ಬಿಜೆಪಿ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ.

ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ, ಡಿಸಿಎಂ ಭೇಟಿ ವೇಳೆ ರಾಜಕೀಯ ವಿಚಾರ ಚರ್ಚೆ ಮಾಡಿಲ್ಲ. ರಾಜಕೀಯೇತರ ಹಲವು ವಿಚಾರಗಳನ್ನು ಚರ್ಚೆ ಮಾಡಲಾಗಿದೆ ಎಂದು ಹೇಳಿದರು.
ನಾನು ದಾವಣಗೆರೆ ಲೋಕಸಭಾ ಕ್ಷೇತ್ರದ ಟಿಕೆಟ್​ಗೆ ಪ್ರಬಲ ಆಕಾಂಕ್ಷಿ. ದಾವಣಗೆರೆ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದು ಮೊದಲೇ ಹೇಳಿದ್ದೇನೆ ಎಂದರು.

ಬರದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದೇನೆ. ಡಿಕೆ ಶಿವಕುಮಾರ್​ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಭೇಟಿಯಾಗಿದ್ದೆ. ಹೀಗಾಗಿ ಇಂದು ​ ಭೇಟಿಯಾಗಿ ಮಾತನಾಡಿದ್ದೇನೆ ಎಂದು ಹೇಳಿದರು. ಹೊನ್ನಾಳಿ ಕ್ಷೇತ್ರವನ್ನ ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡುವಂತೆ ಮನವಿ ಮಾಡಿರುವೆ ಎಂದು ತಿಳಿಸಿದರು.

Leave A Reply

Your email address will not be published.