Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

‘ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿರುವ ಬೈಸಿಕಲ್‌ ಮತ್ತೆ ವಿತರಣೆ’ – ಸಿಎಂ ಭರವಸೆ

0

ಬೆಂಗಳೂರು: ಶಾಲಾ ಮಕ್ಕಳಿಗೆ ಬೈಸಿಕಲ್‌ ವಿತರಣೆ ಯೋಜನೆ ನಾಲ್ಕು ವರ್ಷ ಗಳಿಂದ ಸ್ಥಗಿತಗೊಂಡಿದ್ದು, ಇದೀಗ ಮತ್ತೆ ಚಾಲನೆ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಈ ಕುರಿತು ಮತನಾಡಿದ ಅವರು, ಶಾಲಾ ಮಕ್ಕಳ ಸೈಕಲ್‌ ವಿತರಣೆ ಯೋಜನೆ ಹಲವು ವರ್ಷಗಳಿಂದ ಸ್ಥಗಿತಗೊಂಡಿದ್ದು, ಯೋಜನೆ ಪುನಾರಂಭಿಸುವ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಇನ್ನು 2006-07ರಲ್ಲಿ ಆರಂಭಗೊಂಡ ಈ ಯೋಜನೆಯಡಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುವ ಸರಕಾರಿ ಶಾಲಾ ಮಕ್ಕ ಳಿಗೆ ಸರಕಾರದ ವತಿಯಿಂದ ಉಚಿತವಾಗಿ ಸೈಕಲ್‌ಗ‌ಳನ್ನು ನೀಡಲಾಗುತ್ತಿತ್ತು. ಆದರೆ ಈ ಯೋಜನೆಯನ್ನು ನಾಲ್ಕು ವರ್ಷಗಳಿಂದ ಸ್ಥಗಿತಗೊಳಿಸಲಾಗಿದ್ದು ಇದೀಗ ಮತ್ತೆ ಚಾಲನೆ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

Leave A Reply

Your email address will not be published.