Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

ನಾಳಿನ ಸಂಪುಟ ಸಭೆಯಲ್ಲಿ ಪಠ್ಯ ಬಗ್ಗೆ ಪರಿಷ್ಕರಣೆ ತೀರ್ಮಾನ

0

ಬೆಂಗಳೂರು: ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಹಿಂದಿನ ಬಿಜೆಪಿ ಸರ್ಕಾರದಲ್ಲಿ ಪರಿಷ್ಕರಿಸಿದ್ದ ಕೆಲವೊಂದು ಅಧ್ಯಾಯಗಳನ್ನು ಕೈಬಿಡಲು ನಿರ್ಧರಿಸಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಈ ಸಾಲಿನ ಮಟ್ಟಿಗೆ ವಿವಾದಿತ ಹಾಗೂ ಆಕ್ಷೇಪಣೆಗಳಿರುವ ಪಠ್ಯಗಳನ್ನು ಬೋಧನೆ, ಪರೀಕ್ಷೆ ಮತ್ತು ಮೌಲ್ಯಮಾಪನ ಪ್ರಕ್ರಿಯೆಯಿಂದ ಕೈಬಿಡಲು ತೀರ್ಮಾನಿಸಲಾಗಿದೆ.

ವಿಧಾನಪರಿಷತ್ತಿನ ಮೂರು ಸ್ಥಾನಗಳಿಗೆ ಉಪ ಚುನಾವಣೆ: ದಿನಾಂಕ ಫಿಕ್ಸ್.!

ಈ ಸಭೆಯಲ್ಲಿ ಈಗಾಗಲೇ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಯಾವುದೇ ಆತುರದ ನಿರ್ಧಾರ ತೆಗೆದುಕೊಳ್ಳಬಾರದು ಎಂದು ತಜ್ಞರು , ಸಾಹಿತಿಗಳು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಹೀಗಾಗಿ ಮುಂದಿನ ಸಂಪುಟದಲ್ಲಿ ಮತ್ತೊಮ್ಮೆ ಈ ವಿಷಯ ಚರ್ಚಿಸಿ ಘೋಷಣೆ ಮಾಡುವುದಾಗಿ ಸಿಎಂ ಹೇಳಿರುವುದಾಗಿ ಮೂಲಗಳು ತಿಳಿಸಿವೆ.

Leave A Reply

Your email address will not be published.