Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

ನಾಳೆ ಇಸ್ರೋಗೆ ಪ್ರಧಾನಿ ಮೋದಿ ಭೇಟಿ- ವಾಹನ ಸಂಚಾರ ಬದಲಾವಣೆ

0

ಬೆಂಗಳೂರು: ನಾಳೆ ಇಸ್ರೋಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಚಂದ್ರಯಾನ -3 ಯಶಸ್ಸಿಯಾದ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲಿದ್ದಾರೆ.

ಈ ನಿಟ್ಟಿನಲ್ಲಿ ಮೋದಿಯ ಅಗಮನದಿಂದ ನಗರದ ಹಲವು ರಸ್ತೆಗಳಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಗ್ಗೆ 4.30ರಿಂದ ಬೆಳಗ್ಗೆ 9.30ರವರೆಗೆ ಸಂಚಾರ ಬದಲಾವಣೆ ಮಾಡಲಾಗಿದೆ ಎನ್ನಲಾಗಿದೆ.

ನಗರದ ಹಳೇ ಏರ್​​ಪೋರ್ಟ್​ ರಸ್ತೆ, ಹಳೇ ಮದ್ರಾಸ್ ರಸ್ತೆ, ಎಂ.ಜಿ.ರಸ್ತೆ, ಕಬ್ಬನ್ ರಸ್ತೆ, ರಾಜಭವನ ರಸ್ತೆ, ಬಳ್ಳಾರಿ ರಸ್ತೆ(ಮೇಖ್ರಿ ಸರ್ಕಲ್) , ಸಿ.ವಿ.ರಾಮನ್ ರಸ್ತೆ, ಯಶವಂತಪುರ ಫ್ಲೈಓವರ್, ತುಮಕೂರು ರಸ್ತೆ (ಯಶವಂತಪುರದಿಂದ ನಾಗಸಂದ್ರದವರೆಗೆ) ಮಾಗಡಿ ರಸ್ತೆ, ಗೊರಗುಂಟೆ ಪಾಳ್ಯ ಜಂಕ್ಷನ್‌ನಿಂದ ಸುಮನಹಳ್ಳಿ, ಗುಬ್ಬಿ ತೋಟದಪ್ಪ ರಸ್ತೆ, ಜಾಲಹಳ್ಳಿ ಕ್ರಾಸ್‌ ರಸ್ತೆಯಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ.

ನಾಳೆ ಬೆಳಗ್ಗೆ 4ರಿಂದ ಬೆಳಗ್ಗೆ 11ರವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದ್ದು, ಇದಕ್ಕೆ ಸಾರ್ವಜನಿಕರು ಸಹಕರಿಸುವಂತೆ ನಗರ ಪೊಲೀಸರು ಮನವಿ ಮಾಡಿದ್ದಾರೆ.

Leave A Reply

Your email address will not be published.