ಚಿತ್ರದುರ್ಗ: ವಿಧಾನಪರಿಷತ್ ಮಾಜಿ ಸದಸ್ಯ ಜಿ.ರಘು ಆಚಾರ್ ಅವರು ಏ.14ರಂದು ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಗೊಳ್ಳಲಿದ್ದಾರೆ.
2023ರ ಚಿತ್ರದುರ್ಗ ವಿಧಾನಸಭೆ ಕ್ಷೇತ್ರದ ಪ್ರಭಲ ಆಕಾಂಕ್ಷಿಯಾಗಿದ್ದ ಜಿ.ರಘು ಆಚಾರ್, ಕಾಂಗ್ರೆಸ್ ಪಕ್ಷ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಇತ್ತೀಚೆಗಷ್ಟೇ ರಾಜೀನಾಮೆ ಸಲ್ಲಿಸಿದ್ದರು. ಚಿತ್ರದುರ್ಗ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಎಲ್ಲಾ ರೀತಿಯಲ್ಲು ತಯಾರಿ ಮಾಡಿಕೊಂಡಿರುವ ಅವರು, ಇಂದು ಬೆಂಗಳೂರಿನ ಜೆಪಿ ಭವನದಲ್ಲಿ ತಮ್ಮ ಅಪಾರ ಬೆಂಬಲಿಗರೊಂದಿಗೆ ಮಧ್ಯಾಹ್ನ 12:07ಕ್ಕೆ ಸರಿಯಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹಾಗು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಅವರ ನೇತೃತ್ವದಲ್ಲಿ ಪಕ್ಷ ಸೇರಲಿದ್ದಾರೆ.
ಅವರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿರುವ ರಘು ಆಚಾರ್ ಬೆಂಬಲಿಗರು, ಅಭಿಮಾನಿಗಳೂ ಕೂಡ ಜೆಡಿಎಸ್ ಸೇರಲಿದ್ದು, ಪಕ್ಷ ಸೇರ್ಪಡೆಗೊಂಡ ಬಳಿಕ ಮುಂದಿನ ನಡೆಯ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲದು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ