ಹೊಸದಿಲ್ಲಿ:ಪ್ರಧಾನಿ ನರೇಂದ್ರ ಮೋದಿ ಅವರ ನೀತಿಯಿಂದಾಗಿ ಉಂಟಾಗಿರುವ ನಿರುದ್ಯೋಗ ಸಮಸ್ಯೆಯೇ ಸಂಸತ್ ಭದ್ರತಾ ವೈಫಲ್ಯದ ಘಟನೆಗೆ ಕಾರಣ ಎಂದು ಕಾಂಗ್ರೆಸ್ ಸಂಸದ ರಾಹುಲ್ ಆರೋಪಿಸಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮೋದಿ ಅವರ ನೀತಿಯಿಂದಾಗಿ ದೇಶದ ನಾಗರಿಕರಿಗೆ ಉದ್ಯೋಗ ದೊರೆಯುತ್ತಿಲ್ಲ. ನಿರುದ್ಯೋಗದ ಕಾರಣದಿಂದಾಗಿಯೇ ಈ ಭದ್ರತಾ ವೈಫಲ್ಯ ಉಂಟಾಗಿದೆ ಎಂದು ಹೇಳಿದರು.
ಪ್ರಸ್ತುತ ದೇಶದ ನಾಗರಿಕರು ಎದುರಿಸುತ್ತಿರುವ ಅತ್ಯಂತ ದೊಡ್ಡ ಸಮಸ್ಯೆ ನಿರುದ್ಯೋಗ, ಹಣದುಬ್ಬರ ಎಂದು ತಿಳಿಸಿದರು.