ರಾಜ್ಯದಲ್ಲಿ ಇತ್ತೀಚೆಗೆ ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ, ಹೋಟೆಲ್, ರೆಸ್ಟೋರೆಂಟ್ ಹಾಗೂ ಲಘು ಉಪಾಹಾರ ಕೇಂದ್ರಗಳಲ್ಲಿ ಸ್ವಚ್ಛತೆ ಇಲ್ಲದಿರುವುದು, ಕಲುಷಿತ ನೀರು, ವಿಷಾಹಾರ ಸೇವನೆ, ಕಲಬೆರಕೆ, ಅವಧಿ
ಮೀರಿದ ಪದಾರ್ಥಗಳನ್ನು ಉಪಯೋಗಿಸುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿರುವುದನ್ನು ಗಮನಿಸಿದ ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರು ರಾಜ್ಯಾದ್ಯಂತ ತಪಾಸಣೆ ನಡೆಸಲು ಆದೇಶಿಸಿದ್ದಾರೆ. ಈ ಹಿನ್ನೆಲೆ ಅಧಿಕಾರಿಗಳು ತಪಾಸಣೆಗೆ ಮುಂದಾಗಿದ್ದಾರೆ.