Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ನೆಹರೂ ಸ್ಮಾರಕವನ್ನು ‘ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯವೆಂದು’ ಮರುನಾಮಕರಣ

0

ನವದೆಹಲಿ:  ನೆಹರೂ ಸ್ಮಾರಕ ವಸ್ತುಸಂಗ್ರಹಾಲಯವನ್ನು ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಎಂದು ಅಧಿಕೃತವಾಗಿ ಕೇಂದ್ರ ಸರ್ಕಾರ ಮರುನಾಮಕರಣ ಮಾಡಿದೆ.

ವಸ್ತುಸಂಗ್ರಹಾಲಯದ ಉಪಾಧ್ಯಕ್ಷ ಎ. ಸೂರ್ಯ ಪ್ರಕಾಶ್ ಅವರು ಈ ಕುರಿತು ತಮ್ಮ ಟ್ವಿಟ್ಟರ್‌ (ಎಕ್ಸ್‌) ಖಾತೆಯಲ್ಲಿ ತಿಳಿಸಿದ್ದಾರೆ. ಆ.14 ರಿಂದ ಅಧಿಕೃತವಾಗಿ ನೆಹರೂ ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆಯ ಹೆಸರು ಬದಲಾಗಿದೆ. ಪ್ರಜಾಪ್ರಭುತ್ವೀಕರಣ ಮತ್ತು ವೈವಿಧ್ಯೀಕರಣಕ್ಕೆ ಅನುಗುಣವಾಗಿ ಹೆಸರನ್ನು ಬದಲಾಯಿಸಲಾಗಿದೆ ಎಂದು ಸೂರ್ಯ ಪ್ರಕಾಶ್‌ ತಿಳಿಸಿದ್ದಾರೆ.

ಸಭೆಯೊಂದರಲ್ಲಿ ಈ ವಸ್ತುಸಂಗ್ರಹಾಲಯದ ಹೆಸರು ಬದಲಾವಣೆ ಮಾಡುವ ಕುರಿತು ನಿರ್ಧರಿಸಲಾಗಿತ್ತು. ಸೊಸೈಟಿಯ ಉಪಾಧ್ಯಕ್ಷರಾಗಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸ್ಮಾರಕ ಮ್ಯೂಸಿಯಂ ಮತ್ತು ಲೈಬ್ರರಿ ಸೊಸೈಟಿಯ ವಿಶೇಷ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿತ್ತು.

 

Leave A Reply

Your email address will not be published.