ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಅಂತ್ಯಸಂಸ್ಕಾರ ಬೆಂಗಳೂರಿನ ಶ್ರೀರಾಂಪುರದ ಹರಿಶ್ಚಂದ್ರಘಾಟ್ ನಲ್ಲಿ ನೆರವೇರಿತು.
ಬಿಲ್ಲವ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಸಲಾಯಿತು. ಪತಿ ವಿಜಯ ರಾಘವೇಂದ್ರ ಹಾಗೂ ಪುತ್ರ ಶೌರ್ಯ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು. ಸ್ಪಂದನಾ ಅವರಿಗೆ ಕುಟುಂಬಸ್ಥರು, ಸಂಬಂಧಿಕರು, ಸ್ನೇಹಿತ ವರ್ಗ, ಸಿನಿಮಾ ರಂಗದ ತಾರೆಯರು ಅಂತಿಮ ವಿದಾಯ ಹೇಳಿದರು.