ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿರುವ ಪಠ್ಯ ಪುಸ್ತಕವನ್ನು ಪರಿಷ್ಕರಣೆ ಮಾಡುವ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಗೃಹಕಚೇರಿ ಕೃಷ್ಣಾದಲ್ಲಿ ಮಾತನಾಡಿ, ಬಿಜೆಪಿ ಅಧಿಕಾರದ ಅವಧಿಯಲ್ಲಿ ಆಗಿರುವ ಪಠ್ಯ ಪುಸ್ತಕ ಪರಿಷ್ಕರಣೆ ಮಾಡುವ ಕುರಿತಂತೆ ಮುಂದಿನ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಲಾಗುವುದು. ಅಲ್ಲಿ ಸಚಿವ ಅಭಿಪ್ರಾಯ ಪಡೆದು ಮುಂದಿನ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ. ಬಿಜೆಪಿ ಆಡಳಿತದ ಅವಧಿಯಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿದ್ದು ರಾಜ್ಯದಲ್ಲಿ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಬಿಜೆಪಿ ಅವಧಿ ಪಠ್ಯ ಪುಸ್ತಕ ಪರಿಷ್ಕರಣೆಯನ್ನು ರದ್ದುಗೊಳಿಸುವಂತೆ ಈಗಾಗಲೇ ಶಿಕ್ಷಣ ತಜ್ಞರು ಹಾಗೂ ಸಂಘಟನೆಗಳು ಸಿಎಂಗೆ ಪತ್ರ ಬರೆದಿದ್ದಾರೆ.