ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿ
ಕೋರ್ಟ್ ಆದೇಶ ನೀಡಿದೆ.
ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಹಾಗೂ ಗ್ಯಾಂಗ್ ನ
ಪೊಲೀಸ್ ಕಸ್ಟಡಿ ಇಂದು ಮುಗಿದ ಹಿನ್ನೆಲೆಯಲ್ಲಿ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು 13 ಆರೋಪಿಗಳನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್
ಕೋರ್ಟ್ ಮುಂದೆ ಹಾಜರು ಪಡಿಸಿದ್ದರು. ಈ ವೇಳೆ ಆರು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಮತ್ತೆ ಕಸ್ಟಡಿಗೆ ಕೇಳಿದ್ದಾರೆ. ಈ
ಹಿನ್ನೆಲೆಯಲ್ಲಿ 6 ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಹಾಗೂ ಆರೋಪಿಗಳನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ಎ
ಆರೋಪಿ ಪವಿತ್ರಾ ಗೌಡ, ಪವನ್, ವಿನಯ್, ಪ್ರದೋಶ್, ನಾಗರಾಜ್, ಲಕ್ಷ್ಮಣ್ ಸೇರಿದಂತೆ 7 ಆರೋಪಿಗಳು ಜೈಲುಪಾಲಾಗಿದ್ದಾರೆ.