Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಸ್ಫೋಟ- ಓರ್ವ ಸಾವು

0

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್‌ಗಳ ತಯಾರಿಕೆಯ ಸಂದರ್ಭದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಬ್ಬರು ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಉತ್ತರ 24 ಪರಗಣ ಜಿಲ್ಲೆಯ ಹರೋವಾ ಪ್ರದೇಶದ ಶಾಲಿಪುರ ಗ್ರಾಮದಲ್ಲಿ ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ.

ವಿಧಾನ ಪರಿಷತ್ ನೂತನ ಸದಸ್ಯರಾಗಿ ಕಾಂಗ್ರೆಸ್ ನ ಮೂವರು ನಾಯಕರು ಪ್ರಮಾಣವಚನ ಸ್ವೀಕಾರ

ಮೃತರನ್ನು ಪರಿತೋಷ್ ಮೊಂಡಲ್ ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಇನ್ನೂ ಯಾರನ್ನೂ ಬಂಧಿಸಲಾಗಿಲ್ಲ ಎಂದು ಬಸಿರ್‌ಹತ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗಾಯಗೊಂಡವರನ್ನು ಬಸಿರ್ಹತ್ ಉಪ-ವಿಭಾಗೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ನಾವು ಸ್ಫೋಟದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜುಲೈ 8 ರಂದು ನಡೆಯಲಿರುವ ಪಂಚಾಯತ್ ಚುನಾವಣೆಗೆ ಮುನ್ನ ರಾಜ್ಯದ ಹಲವು ಭಾಗಗಳಲ್ಲಿ ಹಿಂಸಾಚಾರಗಳು ವರದಿಯಾಗಿದ್ದು, ಹಲವಾರು ಜೀವಗಳನ್ನು ಕಳೆದುಕೊಂಡಿವೆ.

Leave A Reply

Your email address will not be published.