ಪಶ್ಚಿಮ ಮೇದಿನಿಪುರ (ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳದ ಪಶ್ಚಿಮ ಮೇದಿನಿಪುರ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಬೃಹತ್ ಸ್ಫೋಟದಲ್ಲಿ ಇಲ್ಲಿಯವರೆಗೂ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಏತನ್ಮಧ್ಯೆ, ರಾಜ್ಯ ಸರ್ಕಾರದ ನಿರ್ದೇಶನದ ಮೇರೆಗೆ ಅಪರಾಧ ತನಿಖಾ ಇಲಾಖೆ (ಸಿಐಡಿ) ಘಟನೆಯ ತನಿಖೆಯನ್ನು ಪ್ರಾರಂಭಿಸಿದೆ. ಮೂಲಗಳ ಪ್ರಕಾರ, ರಾಜ್ಯ ಸರ್ಕಾರವು ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿದ ನಂತರ ಕೋಲ್ಕತ್ತಾದಿಂದ ಅಪರಾಧ ತನಿಖಾ ವಿಭಾಗದ (ಸಿಐಡಿ) ತಂಡವು ಮಂಗಳವಾರ ರಾತ್ರಿ 9.45 ಕ್ಕೆ ಸ್ಥಳಕ್ಕೆ ತಲುಪಿ ವಿಧಿವಿಜ್ಞಾನ ತಜ್ಞರ ಸಹಾಯದಿಂದ ತನಿಖೆ ಆರಂಭಿಸಿತು. ಪೂರ್ವ ಮೇದಿನಿಪುರ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ್ ಕೆ ಮಾತನಾಡಿ, “ಇಲ್ಲಿಯವರೆಗೆ 9 ಶವಗಳನ್ನು ಹೊರತೆಗೆಯಲಾಗಿದೆ. ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಕೋಲ್ಕತ್ತಾದ ಎಸ್‌ಎಸ್‌ಕೆಎಂಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಇದು ಅಕ್ರಮ ಫ್ಯಾಕ್ಟರಿ. ಈ ಕಾರ್ಖಾನೆಯ ವಿರುದ್ಧ ಈ ಹಿಂದೆಯೂ 3ರಿಂದ 4 ಪ್ರಕರಣಗಳು ದಾಖಲಾಗಿವೆ. ಹಲವು ಬಾರಿ ದಾಳಿ ನಡೆಸಿದ್ದರೂ ಆರೋಪಿಗಳು ಇದನ್ನು ನಡೆಸುತ್ತಲೇ ಇದ್ದಾರೆ. ಕೃಷ್ಣಪಾದ ಬಾಗ್ ಅಲಿಯಾಸ್ ಎಂಬ ಆರೋಪಿಯನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ ಎಸ್ಪಿ ಹೇಳಿದರು. ಮೃತರ ಕುಟುಂಬಕ್ಕೆ 2.5 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 1 ಲಕ್ಷ ರೂಪಾಯಿ ಪರಿಹಾರವನ್ನು ಸಿಎಂ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.
[vc_row][vc_column]
BREAKING NEWS
- ‘ಕಟೀಲ್, ಬೊಮ್ಮಾಯಿ ಅವರೇ ನಿಮ್ಮ ಮನೆಗೂ ಕರೆಂಟ್ ಫ್ರೀ’ ಎಂದ ಕಾಂಗ್ರೆಸ್!
- 2022-23ನೇ ಸಾಲಿನಲ್ಲಿ ಪದವಿ ಪಡೆದ ನಿರುದ್ಯೋಗಿ ಯುವಕ- ಯುವತಿಯರಿಗೆ ‘ಯುವನಿಧಿ’ ಭಾಗ್ಯ ಜಾರಿ ಮಾಡಿದ ಸಿದ್ದು ಸರ್ಕಾರ
- ಮಂಗಳೂರು: ನಗರಾಭಿವೃದ್ದಿ ಪ್ರಾಧಿಕಾರದ ಸಿಬ್ಬಂದಿ ಆತ್ಮಹತ್ಯೆ
- ಗೃಹಲಕ್ಷ್ಮಿ ಯೋಜನೆ: ಅರ್ಜಿ ಸಲ್ಲಿಸುವುದು ಹೇಗೆ? ಬೇಕಾದ ದಾಖಲೆಗಳೇನು? ಕೊನೆ ದಿನಾಂಕದ ಮಾಹಿತಿ
- ಉಚಿತ ಬಸ್ ಯೋಜನೆ – ಜೂನ್ 11 ರಿಂದ ಉಚಿತ ಬಸ್ ಪ್ರಯಾಣ
- ಗ್ಯಾರೆಂಟ್ ಜಾರಿ: ಜು.1ರಿಂದ 200 ಯುನಿಟ್ ಉಚಿತ ವಿದ್ಯುತ್, ಎಪಿಎಲ್ ಗೂ ಗೃಹಲಕ್ಷ್ಮಿ
- ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟ ಪ್ರಕರಣ: ಅಪರಾಧಿ ಆದಿತ್ಯ ರಾವ್ ನಿಂದ ಜೈಲಿನಲ್ಲಿ ದಾಂಧಲೆ..!
- ಈ ಆರ್ಥಿಕ ವರ್ಷದಲ್ಲಿ ಎಲ್ಲಾ ಐದೂ ಗ್ಯಾರಂಟಿ ಜಾರಿ: ಷರತ್ತು ಅನ್ವಯ- ಸಿಎಂ
- ಕಡಬ: ಮನೆ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕ ಮೃತ್ಯು
- ಡಿಕೆಶಿ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಸಿಬಿಐ ತನಿಖೆ ತಡೆಯಾಜ್ಞೆ ವಿಸ್ತರಣೆ