ಪಶ್ಚಿಮ ಬಂಗಾಳದ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ ನಿಧನ

ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಇಂದು(ಆ.8) ಇಹಲೋಕ ತ್ಯಜಿಸಿದರು.  ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬುದ್ಧದೇವ್ ಭಟ್ಟಾಚಾರ್ಯ ಅವರು ಇಂದು ಬೆಳಿಗ್ಗೆ ದಕ್ಷಿಣ ಕೋಲ್ಕತ್ತಾದ ನಿವಾಸದಲ್ಲಿ ವಿಧಿವಶರಾದರು. ಬುದ್ಧದೇವ್ ಭಟ್ಟಾಚಾರ್ಯ ಅವರಿಗೆ 80 ವರ್ಷ ವಯಸ್ಸಾಗಿತ್ತು.

ಭಟ್ಟಾಚಾರ್ಯ ಅವರು ಪತ್ನಿ ಮೀರಾ ಮತ್ತು ಪುತ್ರಿ ಸುಚೇತನಾರನ್ನು ಅಗಲಿದ್ದಾರೆ. ಬುದ್ಧದೇವ್ ಭಟ್ಟಾಚಾರ್ಯ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಇದರಿಂದಾಗಿ ಅವರನ್ನು ಆಗಾಗ್ಗೆ ಆಸ್ಪತ್ರೆಗೆ ದಾಖಲಿಸಲಾಗುತ್ತಿತ್ತು. ಕೆಲವು ದಿನಗಳ ಹಿಂದೆಯಷ್ಟೇ ಡಿಸ್ಚಾರ್ಜ್ ಆಗಿದ್ದರು.

ಭಾರತೀಯ ಕಮ್ಯೂನಿಸ್ಟ್ ಪಕ್ಷ ಮಾರ್ಕ್ಸ್‌ವಾದ (ಸಿಪಿಐಎಂ) ಉನ್ನತ ನಿರ್ಧಾರ ತೆಗೆದುಕೊಳ್ಳುವ ಸಮಿತಿಯಾದ ಪಾಲಿಟ್‌ ಬ್ಯೂರೊದ ಮಾಜಿ ಸದಸ್ಯರಾಗಿದ್ದರು. 2000 ರಿಂದ 2011 ರವರೆಗೆ ಸತತ 11 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಎರಡನೇ ಮತ್ತು ಕೊನೆಯ ಸಿಪಿಎಂ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆ ಅವರದು.

Advertisement

ಭಟ್ಟಾಚಾರ್ಯ ಅವರು 2011 ರ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಯವರ ಟಿಎಂಪಿ ಪಕ್ಷದ ವಿರುದ್ಧ ಸೋಲು ಕಂಡಿದ್ದರು. ಆ ಮೂಲಕ ರಾಜ್ಯದಲ್ಲಿ ಎಡರಂಗದ 34 ವರ್ಷಗಳ ಆಳ್ವಿಕೆ ಕೊನೆಗೊಂಡಿತ್ತು. ಆರೋಗ್ಯ ಸಮಸ್ಯೆಯಿಂದ ಇತ್ತೀಚೆಗೆ ರಾಜಕೀಯ ರಂಗದಿಂದ ದೂರ ಉಳಿದಿದ್ದರು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement