ವಿಜಯಪುರ: ಪಾಕಿಸ್ತಾನ್ ಜಿಂದಾಬಾದ್, ಓನ್ಲಿ ಮುಸ್ಲಿಮ್ ರಾಷ್ಟ್ರ’ ಎಂದು ಸಾಮಾಜಿಕ ಮಾಧ್ಯಮ ಇನ್ಸಸ್ಟಾಗ್ರಾಂನಲ್ಲಿ ಸ್ಟೇಟಸ್ ಹಾಕಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ಹಿರೂರು ಗ್ರಾಮದ ಯುವಕ ಇಬ್ರಾಹಿಂ ಮುರ್ತುಜಸಾಬ್ ಮುಲ್ಲಾ ಇನ್ಸಸ್ಟಾಗ್ರಾಂನಲ್ಲಿ ಸ್ಟೇಟಸ್ ಹಾಕಿದ್ದ. ಇದನ್ನು ವೀಕ್ಷಿಸಿದ ಸ್ಥಳಿಯರು ತಾಳಿಕೋಟೆ ಪೊಲೀಸರಿಗೆ ಮಾಹಿತಿ ನೀಡಿದ್ದರು.
ದೇಶದಲ್ಲಿಂದು 6 ರಾಜ್ಯಗಳ 100 ಕ್ಕೂ ಹೆಚ್ಚು ಸ್ಥಳಗಳಲ್ಲಿ ಎನ್‌ಐಎ ದಾಳಿ
ಸ್ವಯಂಪ್ರೇರಿತ ದೂರು ದಾಖಲು ಮಾಡಿಕೊಂಡ ತಾಳಿಕೋಟೆ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ. ನಂತರ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಸದ್ಯ ಆತನನ್ನು ನ್ಯಾಯಾಂಗ ಬಂಧನದಲ್ಲಿ ಇರಿಸುವಂತೆ ಆದೇಶ ನೀಡಿದೆ