ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಸಿವಿಲ್) 545 ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶಿಸಿದೆ. ಹೌದು. 545 ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದ ತನಿಖೆಗಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಏಕ ಸದಸ್ಯ ತನಿಖಾ ಆಯೋಗವನ್ನು ನೇಮಿಸಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಈ ಹಗರಣದ ತನಿಖೆಯನ್ನು 3 ತಿಂಗಳೊಳಗಾಗಿ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸುವಂತೆ ಸರ್ಕಾರ ಸೂಚಿಸಿದೆ. 2021ರ ಜನವರಿ 21ರಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಸಿವಿಲ್) 545 ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿತ್ತು. ಅದೇ ವರ್ಷ ಅಕ್ಟೋಬರ್ 3ರಂದು ರಾಜ್ಯದ 92 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಲಿಖಿತ ಪರೀಕ್ಷೆಯಲ್ಲಿ ಅಕ್ರಮಗಳು ಕಂಡು ಬಂದ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಸಿಐಡಿ ತನಿಖೆಗೆ ಒಳಪಡಿಸಿತ್ತು. ಸದ್ಯ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರವು ಪಿಎಸ್ಐ ನೇಮಕಾತಿಯಲ್ಲಿ ನಿಯಮಗಳ ಉಲ್ಲಂಘನೆ, ವಿವಿಧ ಹಂತಗಳಲ್ಲಿ ನಡೆದಿರುವ ಅಕ್ರಮಗಳು ಹಾಗೂ ಯಾರೆಲ್ಲಾ ದುರ್ಲಾಭ ಪಡೆದಿದ್ದಾರೆ ಎಂಬುದರ ಕುರಿತು ತನಿಖೆ ನಡೆಸುವಂತೆ ಆದೇಶದಲ್ಲಿ ಉಲ್ಲೇಖಿಸಿದೆ. ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿನ 52 ಅಭ್ಯರ್ಥಿಗಳು ಒಳಗೊಂಡಂತೆ ಇತರೆ ಆರೋಪಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು. ಸಂಬಂಧಪಟ್ಟ ನ್ಯಾಯಾಲಯಗಳಲ್ಲಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಲಾಗಿದ್ದು, ಹೆಚ್ಚುವರಿ ತನಿಖೆಯನ್ನು ಮುಂದುವರಿಸಲಾಗಿದೆ.
[vc_row][vc_column]
BREAKING NEWS
- ವಂಚನೆ ಪ್ರಕರಣ: ಆರೋಪಿ ಚೈತ್ರಾ ಕುಂದಾಪುರ, ಶ್ರೀಕಾಂತ್ಗೆ ಜಾಮೀನು
- ಪ್ರಾಂಜಲ್ ಕುಟುಂಬಕ್ಕೆ ₹50 ಲಕ್ಷ ಪರಿಹಾರ ಚೆಕ್ ಇಂದು ಹಸ್ತಾಂತರ: ಸಿಎಂ
- ತೆಲಂಗಾಣ ಸಿಎಂ ಆಯ್ಕೆ ತೀರ್ಮಾನ ಎಐಸಿಸಿ ಅಧ್ಯಕ್ಷರ ಹೆಗಲಿಗೆ: ಡಿಕೆಶಿ
- ಮಿಚಾಂಗ್ ಅಬ್ಬರಕ್ಕೆ ಮುಳುಗಿದ ಚೆನ್ನೈ
- ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ – ಬೆಂಗಳೂರು ಸೇರಿ ರಾಜ್ಯದ 63 ಕಡೆ ದಾಳಿ
- 200 ಟನ್ ಮೆಕ್ಕೆಜೋಳ ಕುಸಿತ ಪ್ರಕರಣ: ಮೂವರು ಕಾರ್ಮಿಕರ ಸಾವು
- ಬ್ರೇಕಿಂಗ್ ಇಂದು ಬೆಳ್ಳಂಬೆಳಗ್ಗೆ 63 ಕಡೆ ಲೋಕಾಯುಕ್ತ ದಾಳಿ.!
- ತಡರಾತ್ರಿ ಫುಡ್ಸ್ ಗೋದಾಮಿನ ಸಂಸ್ಕರಣಾ ಘಟಕದಲ್ಲಿ ಮೆಕ್ಕೆಜೋಳ ಕುಸಿತ ಮೂವರು ಸಾವು.!
- ಮಿಚಾಂಗ್ ಚಂಡಮಾರುತ ಎಫೆಕ್ಟ್ ರಾಜ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಳೆ.!
- ಕೊಡಗು ಸೈನಿಕ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ