Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲು.!

0

ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲು.!

ಬೆಂಗಳೂರು: ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪುನೀತ್ ವಿರುದ್ಧ ರಾಜ್ಯದ 11 ಠಾಣೆಗಳಲ್ಲಿ ಎಫ್ಐಆರ್ ದಾಖಲಾಗಿತ್ತು. ಕೆಲ ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿತ್ತು. ಅಪರಾಧ ಪ್ರಕರಣಗಳಲ್ಲಿ ಪದೇ ಪದೇ ಭಾಗಿಯಾಗುತ್ತಿರುವುದರಿಂದ ಪುನೀತ್ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ’ ಎಂದು ಸಿಸಿಬಿ ಮೂಲಗಳು ಹೇಳಿವೆ.

‘ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಕೆರೆಹಳ್ಳಿಯ ಪುನೀತ್, ನಗರದ ಜೆ.ಪಿ.ನಗರ 7ನೇ ಹಂತದಲ್ಲಿ ವಾಸವಿದ್ದ. ರಾಷ್ಟ್ರ ರಕ್ಷಣಾ ಪಡೆ ಹೆಸರಿನಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುತ್ತಿದ್ದ. ಎಲ್ಲ ಕೃತ್ಯಗಳ ಬಗ್ಗೆ ವರದಿ ಸಿದ್ಧಪಡಿಸಿ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.!

Leave A Reply

Your email address will not be published.