ಹಾಸನ : ಪೆನ್‌ಡ್ರೈವ್ ವೀಡಿಯೋ ಹಂಚಿಕೆ ಪ್ರಕರಣದಲ್ಲಿ ಬಂಧಿತರಾಗಿ ಸೆರೆವಾಸ ಅನುಭವಿಸುತ್ತಿದ್ದ ಆರೋಪಿಗಳಾದ ಚೇತನ್ ಹಾಗೂ ಲಿಖಿತ್‌ಗೌಡಗೆ ಗುರುವಾರ ಮಧ್ಯಾಹ್ನ ಜಾಮೀನು ಮಂಜೂರಾಗಿದೆ.
ಮೂರನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದು.ಪೆನ್‌ಡ್ರೈವ್ ಹಂಚಿಕೆ ಪ್ರಕರಣ ಆರನೇ ಮತ್ತು ಏಳನೇ ಆರೋಪಿಯಾಗಿರುವ ಯಲಗುಂದ ಚೇತನ್ ಹಾಗೂ ಲಿಖಿತ್‌ಗೌಡ.
ಪ್ರೀತಂಗೌಡ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಮೇ.12 ರಂದು ಚೇತನ್ ಹಾಗೂ ಲಿಖಿತ್‌ಗೌಡನನ್ನು ಬಂಧಿಸಿದ್ದ ಎಸ್‌ಐಟಿ ಟೀಂ ಹದಿನೆಂಟು ದಿನಗಳ ಬಳಿಕ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇಂದು ಸಂಜೆ ಅಥವಾ ನಾಳೆ ಇಬ್ಬರು ಜೈಲಿನಿಂದ ಬಿಡುಗಡೆ ಸಾಧ್ಯತೆ ಇದ್ದು ಸದ್ಯ ಹಾಸನದ ಸಂತೇಪೇಟೆಯಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಚೇತನ್ ಹಾಗೂ ಲಿಖಿತ್‌ಗೌಡ ಇದ್ದಾರೆ.