ಬೆಂಗಳೂರು: ಪೊಲೀಸರಿಗೆ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಶುಭಸುದ್ದಿ ನೀಡಿದ್ದು, ಸಿಬ್ಬಂದಿ ತಮ್ಮ ಹುಟ್ಟುಹಬ್ಬದ ದಿನದಂದು ರಜೆ ತೆಗೆದುಕೊಳ್ಳಬಹುದೆಂದು ಹೇಳಿದ್ದಾರೆ.
ಪೊಲೀಸ್ ಸಿಬ್ಬಂದಿ ತಮ್ಮ ಕುಟುಂಬದೊಂದಿಗೆ ಕಾಲ ಕಳೆಯಲು ಈ ನಿರ್ಧಾರಕ್ಕೆ ಬರಲಾಗಿದ್ದು, ಆಗಸ್ಟ್ ತಿಂಗಳಿನಿಂದ ಇದು ಜಾರಿಗೆ ಬರಲಿದೆ.
ರಜೆಯ ಜೊತೆಗೆ ಪೊಲೀಸ್ ಇಲಾಖೆಯ ವತಿಯಿಂದ ಗ್ರೀಟಿಂಗ್ ಕಾರ್ಡ್ ಕೂಡಾ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.