ಪ್ರಜ್ವಲ್ ಪೆನ್‌ಡ್ರೈವ್ ಹಂಚಿಕೆ ಪ್ರಕರಣ: 18 ಕಡೆ ಎಸ್‌ಐಟಿ ರೇಡ್ – ಪ್ರೀತಂ ಗೌಡ ಆಪ್ತನ ಮನೆಯಲ್ಲಿ ಸಿಕ್ಕಿದ್ದಾದರೂ ಏನು?

WhatsApp
Telegram
Facebook
Twitter
LinkedIn

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ ಸಂಬಂಧ ನಿನ್ನೆ ಹದಿನೆಂಟು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದ ಎಸ್ಐಟಿ ಮುಂಜಾನೆ 3.30ರವರೆಗೂ ಶೋಧಕಾರ್ಯ ನಡೆಸಿದೆ.

ಮಾಜಿ ಶಾಸಕ ಪ್ರೀತಂಗೌಡ ಆಪ್ತರಾದ ಕ್ವಾಲಿಟಿ ಬಾರ್ ಶರತ್, ಪುನೀತ್, ಎಚ್.ಪಿ.ಕಿರಣ್, ಕಾಂಗ್ರೆಸ್ ಕಾರ್ಯಕರ್ತರಾದ ಪುಟ್ಟರಾಜು, ನವೀನ್‌ಗೌಡ, ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ಕಾರ್ತಿಕ್, ಶಶಿ, ಚೇತನ್‌ಗೌಡ ನಿವಾಸದ ಮೇಲೂ ಎಸ್ಐಟಿ ತಂಡಗಳು ಪ್ರತ್ಯೇಕವಾಗಿ ದಾಳಿ ನಡೆಸಿದ್ದವು.

ಕ್ವಾಲಿಟಿ ಬಾರ್ ಶರತ್ ಅವರ ಬೆಂಗಳೂರಿನ ಗೋಪಾಲನಗರದ ಶೋಭಾ ಅಪಾರ್ಟ್‌ಮೆಂಟ್‌ನಲ್ಲಿರುವ ಫ್ಲಾಟ್ ಮೇಲೂ ದಾಳಿ ಮಾಡಿದ್ದ ಎಸ್‌ಐಟಿ ಟೀಂ ಶರತ್ ಅವರ ಐಫೋನ್ ಅನಮಾತುಪಡಿಸಿಕೊಂಡು ಪರಿಶೀಲಿಸಿದೆ. ಆದರೆ ಅವರ ಮನೆಯಲ್ಲಿ ಕೇಸಿಗೆ ಉಪಯುಕ್ತ ದಾಖಲಾತಿ, ಎಲೆಕ್ಟ್ರಾನಿಕ್ ವಸ್ತುಗಳು ದೊರಕಿಲ್ಲ ಎಂದು ಎಸ್ಐಟಿ ಶೋಧನಾ ಪಂಚನಾಮೆಯಲ್ಲಿ ಹೇಳಿದೆ. ವಿವಿಧೆಡೆಯ ದಾಳಿಗಳಿಂದ ಎಸ್ಐಟಿ ತಂಡಗಳು ಮಹತ್ವದ ಸಾಕ್ಷ್ಯ ಹಾಗೂ ದಾಖಲೆಗಳನ್ನು ವಶಪಡಿಸಿಕೊಂಡು ಹೊರಟಿವೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon