ಬೆಂಗಳೂರು:ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಸಂಸದ ಪ್ರಜ್ವಲ್ ರೇವಣ್ಣ ಕೇಳಿದಂತೆ ಸಮಯ ಕೊಡಲು ಆಗಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ವಕೀಲರ ಮೂಲಕ ಒಂದು ವಾರ ಸಮಯ ಕೇಳಿದ್ದಾರೆ. ಆದರೆ ಹಾಗೆ ಸಮಯವನ್ನ ತೆಗೆದುಕೊಳ್ಳಲು ಆಗಲ್ಲ. ಸೆಕ್ಷನ್ 41 (ಎ) ನಲ್ಲಿ ಸಮಯವನ್ನ ಕೊಡಲು ಬರುವುದಿಲ್ಲ ಎಂದು ಹೇಳಿದ್ದಾರೆ.
ಎಸ್ಐಟಿ ನೋಟಿಸ್ ನೀಡಿದ್ದಾರೆ. ರೇವಣ್ಣ ಇಂದು ವಿಚಾರಣೆಗೆ ಹಾಜಾರಾಗುವುದಾಗಿ ಹೇಳಿದ್ದಾರೆ. ಇನ್ನು ಸಿಎಂ ಕೂಡ ಪ್ರಧಾನಿಗೆ ಪತ್ರ ಬರೆದಿದ್ದಾರೆ. ಘಟನೆಯ ಬಗ್ಗೆ ವಿವರಿಸಿ, ಡಿಪ್ಲಾಮೆಟಿಕ್ ಪಾಸ್ ಪೋರ್ಟ್ ರದ್ದು ಮಾಡಿ ಆದಷ್ಟು ಬೇಗ ಕರೆದುಕೊಂಡು ಬರೋದಕ್ಕೆ ಸಹಕರಿಸಬೇಕೆಂದು ಪತ್ರದಲ್ಲಿ ತಿಳಿಸಿದ್ದಾರೆ ಎಂದರು.

































