ನವದೆಹಲಿ: ಲೈಂಗಿಕ ಕಿರುಕುಳದ ಆರೋಪದ ಮೇಲೆ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಸರ್ಕಾರ ಮಾತುಕತೆಗೆ ಆಹ್ವಾನಿಸಿದೆ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಇಂದು ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಠಾಕೂರ್, ಸರ್ಕಾರವು ಕುಸ್ತಿಪಟುಗಳೊಂದಿಗೆ ಅವರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಸಿದ್ಧವಾಗಿದೆ. ನಾನು ಮತ್ತೊಮ್ಮೆ ಕುಸ್ತಿಪಟುಗಳನ್ನು ಅದಕ್ಕಾಗಿ ಆಹ್ವಾನಿಸಿದ್ದೇನೆ ಎಂದರು.
‘ಮಂಗಳೂರು ಸಹಿತ ಮುಂದಿನ ಐದು ವರ್ಷಗಳಲ್ಲಿ ರಾಜ್ಯದ ನಾಲ್ಕು ಕಡೆ ಹಜ್ ಭವನ’ – ಜಮೀರ್
ಇನ್ನು ಕುಸ್ತಿಪಟುಗಳು ಶನಿವಾರ ಅಮಿತ್ ಶಾ ಅವರೊಂದಿಗೆ ತಡರಾತ್ರಿ ಸಭೆ ನಡೆಸಿದ್ದು, ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟು ಬಜರಂಗ್ ಪುನಿಯಾ ಅವರು ಮಾಧ್ಯಮಗಳೊಂದಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ಸಭೆಯ ಬಗ್ಗೆ ಮಾತನಾಡದಂತೆ ಪ್ರತಿಭಟನಾಕಾರರನ್ನು ಸರ್ಕಾರ ಕೇಳಿದೆ ಎಂದು ಹೇಳಿದ್ದಾರೆ.