ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದು ಹೊಸ ಸರ್ಕಾರಕ್ಕೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.
ನೂತನ ಸರ್ಕಾರ ರಚನೆ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಅಭಿನಂದನೆ ತಿಳಿಸಿದ್ದಾರೆ. ‘ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಸಿದ್ದರಾಮಯ್ಯ ಜೀ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಡಿ.ಕೆ ಶಿವಕುಮಾರ್ ಜೀ ಅವರಿಗೆ ಅಭಿನಂದನೆಗಳು. ಫಲಪ್ರದ ಅಧಿಕಾರಾವಧಿಗಾಗಿ ನನ್ನ ಶುಭ ಹಾರೈಕೆಗಳು ಎಂದು ಟ್ವೀಟ್ ಮಾಡುವ ಮೂಲಕ ಶುಭಕೋರಿದ್ದಾರೆ’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.