ಚಿತ್ರದುರ್ಗ: ಸಮನ್ವಯ ಶಿಕ್ಷಣ ಯೋಜನೆಯಡಿಯಲ್ಲಿ ಗೃಹಧಾರಿತ ಮತ್ತು ಶಾಲಾಧಾರಿತ ಶಿಕ್ಷಣ ಪಡೆಯುತ್ತಿರುವ 55 ಮಕ್ಕಳಿಗೆ ಹೊಸದುರ್ಗ ತಾಲ್ಲೂಕಿನ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಫಿಜಿಯೋಥೆರಪಿ ಸೇವೆಯನ್ನು ಪೂರೈಸಲು ಅರ್ಹ ಅಭ್ಯರ್ಥಿಗಳಿಂದ ಹಾಗೂ ಆಯಾ ಹಾಗೂ ಸಹಾಯಕರ ಹುದ್ದೆಗೂ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 2 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಫಿಜಿಯೋಥೆರಪಿ ಹುದ್ದೆಗೆ ಬಿ.ಪಿ.ಟಿ ಮತ್ತು ಡಿ.ಪಿ.ಟಿ ವಿದ್ಯಾರ್ಹತೆ, ಆಯಾ ಹಾಗೂ ಸಹಾಯಕರ ಹುದ್ದೆಗೆ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆಯನ್ನು ಹೊಂದಿರಬೇಕು.
ಅರ್ಹ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಬಿ.ಆರ್.ಸಿ ಕೇಂದ್ರಕ್ಕೆ ಸಲ್ಲಿಸಬೇಕು ಎಂದು ಹೊಸದುರ್ಗ ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.