ಉತ್ತರಾಖಂಡ: ಭೀಕರ ಅಪಘಾತ ಸಂಭವಿಸಿದೆ. ಮಸ್ಸೂರಿಯಿಂದ ಡೆಹ್ರಾಡೂನ್‌ಗೆ ಹೋಗುತ್ತಿದ್ದ ಬಸ್ ತಡೆಗೋಡೆಗೆ ಡಿಕ್ಕಿ ಹೊಡೆದು ಕಣಿವೆಗೆ ಬಿದ್ದಿತು. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.
ಬಸ್ ಚಾಲಕ ಸೇರಿದಂತೆ 20 ಮಂದಿ ಗಾಯಗೊಂಡಿದ್ದಾರೆ. ಮಾಹಿತಿ ಪಡೆದ ಪೊಲೀಸರು ರಕ್ಷಣೆಗೆ ಧಾವಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಮಸ್ಸೂರಿ ಪೊಲೀಸರು ಮಾಹಿತಿ ನೀಡಿದ್ದಾರೆ.