ಭುವನೇಶ್ವರ: ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಿಜೆಡಿ ಸೋತ ಬಳಿಕ ಇದೀಗ ನಿರ್ಗಮಿತ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ರಾಜೀನಾಮೆ ನೀಡಿದ್ದಾರೆ.
ನವೀನ್ ಪಟ್ನಾಯಕ್ ಅವರು ಇಂದು ಬೆಳಗ್ಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲ ರಘುಬರ್ ದಾಸ್ ಅವರನ್ನು ಭೇಟಿ ಮಾಡಿದ್ದಾರೆ. ಆ ನಂತರ ರಾಜ್ಯಪಾಲರಿಗೆ ತನ್ನ ರಾಜೀನಾಮೆ ಪತ್ರವನ್ನು ನವೀನ್ ಪಟ್ನಾಯಕ್ ಸಲ್ಲಿಸಿದ್ದಾರೆ.
ಒಡಿಶಾ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ನಿನ್ನೆ ಚುನಾವಣಾ ಆಯೋಗ ಪ್ರಕಟಿಸಿತು. ಈ ಫಲಿತಾಂಶದ ಪ್ರಕಾರ ಬಿಜೆಪಿಯು 71 ಸ್ಥಾನಗಳನ್ನು ಗೆದ್ದರೆ ನವೀನ್ ಪಟ್ನಾಯಕ್ ಅವರ ಬಿಜೆಪಿ ಕೇವಲ 51 ಸ್ಥಾನವನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಬಿಜೆಪಿಯು 24 ವರ್ಷಗಳ ಬಳಿಕ ತನ್ನ ಅಧಿಕಾರವನ್ನು ಕಳೆದುಕೊಂಡಿದೆ. ಇನ್ನು ಒಡಿಶಾದಲ್ಲಿ 147 ವಿಧಾನಸಭಾ ಸ್ಥಾನಗಳಿದ್ದು, ಸರ್ಕಾರ ರಚನೆಗೆ ಬಹುಮತಕ್ಕೆ 74 ಸ್ಥಾನಗಳ ಅಗತ್ಯವಿದೆ. ಇನ್ನು ಕಾಂಗ್ರೆಸ್ 14 ಸ್ಥಾನಗಳನ್ನು ಪಡೆದುಕೊಂಡಿದೆ.
2019ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಡಿ 112 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಬಿಜೆಪಿ 23 ಸ್ಥಾನಗಳನ್ನು, ಕಾಂಗ್ರೆಸ್ 9 ಸ್ಥಾನಗಳನ್ನು, ಸಿಪಿಐ(ಎಂ) ಕೇವಲ 1 ಸ್ಥಾನವನ್ನು ಪಡೆದುಕೊಂಡಿತ್ತು.