ಬೆಂಗಳೂರು: ಬಿಜೆಪಿಯವರಿಗೆ ಅವರ ಪಕ್ಷಕ್ಕಿಂತ ನಮ್ಮ ಪಕ್ಷದ ಮೇಲೆ ಹೆಚ್ಚು ಆಸಕ್ತಿ ಇದ್ದಂತೆ ಕಾಣುತ್ತಿದೆ ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ವ್ಯಂಗವಾಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷದ ವಿಚಾರವಾಗಿ ನಾವು ಹೆಚ್ಚು ತಲೆಕೆಡಿಸಿಕೊಳ್ಳಲ್ಲ ಎಂದು ಟಾಂಗ್ ನೀಡಿದ್ದಾರೆ.
ಬಿಜೆಪಿಯ ಪ್ರತಿಯೊಬ್ಬ ನಾಯಕರೂ ನಮ್ಮ ಬಗ್ಗೆ ಮಾತನಾಡುತ್ತಾರೆ. ಅವರಿಗೆ ನಮ್ಮ ಪಕ್ಷದ ಮೇಲೆ ಹೆಚ್ಚು ಆಸಕ್ತಿ ಇದ್ದಂತೆ ಕಾಣಿಸುತ್ತಿದೆ. ಅವರೆಲ್ಲರೂ ನಮ್ಮ ಪಕ್ಷಕ್ಕೆ ಬರ್ತಾರೇನೋ. ಅದಕ್ಕಾಗಿ ಅವರ ಪಕ್ಷದ ಬದಲು ನಮ್ಮ ಪಕ್ಷದ ಬಗ್ಗೆ ಹೆಚ್ಚು ಚರ್ಚೆ ನಡೆಸುತ್ತಿದ್ದಾರೇನೋ? ಎಂದು ಬಿಜೆಪಿ ವಿರುದ್ಧ ಟೀಕಿಸಿದ್ದಾರೆ.

































