ರಾಮನಗರ: ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ನಾಯಕರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯವರು ಅಶಾಂತಿ ಸೃಷ್ಟಿಸೋದು ಮಾಮೂಲಿ. ಕಮ್ಯೂನಲ್ ವಿಚಾರ ತೆಗೆದುಕೊಂಡು ರಾಜಕೀಯ ಮಾಡುತ್ತಾರೆ ಎಂದರು.
ಇನ್ನು ಬಿಜೆಪಿಯವರಿಗೆ ಮೈನಾರಿಟಿ ಅವರನ್ನು ಕಂಡರೆ ಆಗಲ್ಲ. ಸ್ಥಳೀಯ ಶಾಸಕ ಹಾಗೂ ಅಧಿಕಾರಿ ಮೈನಾರಿಟಿ ಇರುವುದರಿಂದ ರಾಜಕೀಯ ಮಾಡಿದ್ದಾರೆ. ಅಸೆಂಬ್ಲಿಯಲ್ಲೇ ಮೈನಾರಿಟಿ ಅಧಿಕಾರಿ ಬೇಡ ಎನ್ನುತ್ತಿದ್ದರು ಎಂದು ಕಿಡಿಕಾರಿದ್ದಾರೆ