ಹಾಸನ : ನಾವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡರೆ ಕಾಂಗ್ರೆಸ್ ನವರಿಗೆ ಯಾಕೆ ಹೊಟ್ಟೆ ಉರಿ ಎಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ದಿನ ಬೆಳಗಾದರೆ ಕಾಂಗ್ರೆಸ್ ನವರು ಜೆಡಿಎಸ್ ಬಿಜೆಪಿ ಮೈತ್ರಿ ಬಗ್ಗೆ ಮಾತನಾಡುತ್ತಾರೆ ಜಾತ್ಯಾತೀತ ತತ್ವದ ಬಗ್ಗೆ ಮಾತನಾಡುತ್ತಾರೆ ಆದರೆ 60 ವರ್ಷದಲ್ಲಿ ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರಿಗೆ ಹಾಗೂ ಹಿಂದುಳಿದ ವರ್ಗದವರಿಗೆ ಏನು ಮಾಡಿದೆ ಎಂದು ಪ್ರಶ್ನಿಸಿದರು.
![](https://bcsuddi.com/wp-content/uploads/2025/02/6-2-2025AKHASINA.jpg)