ಶಿವಮೊಗ್ಗ :ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ ಭಾನುಪ್ರಕಾಶ್ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ನಗರದ ಗೋಪಿ ಸರ್ಕಲ್‍ನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಭಾಗಿಯಾಗಿದ್ದರು. ಈ ವೇಳೆ ಅವರು ತೀವ್ರ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ.
ಕೂಡಲೇ ಅವರನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ.
ಎಂ.ಬಿ.ಭಾನುಪ್ರಕಾಶ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಸಂತಾಪ ಸೂಚಿಸಿದ್ದಾರೆ.