ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರವು 40% ಅಲ್ಲ, 50% ಲಂಚ ಪಡೆದಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿ, ಚುನಾವಣೆಗೆ 3 ತಿಂಗಳು ಬಾಕಿ ಇರುವಾಗ ಯಾವುದೇ ಕಾಮಗಾರಿಗಳಿಗೆ ಟೆಂಡರ್ ಕರೆಯುವಂತಿಲ್ಲ. ಆದರೆ ಬಿಜೆಪಿ ಸರ್ಕಾರವು ಸಾವಿರಾರು ಕೋಟಿಯ ಟೆಂಡರ್ ಕರೆದಿದೆ.
ಟೆಂಡರ್ ಕರೆದರೂ ಕಾಮಗಾರಿ ಮಾಡುವಂತಿಲ್ಲ. ಹಾಗಾಗಿ ಶೇ.50% ಕಮಿಷನ್ ಪಡೆಯಲಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದೇವೆ ಎಂದಿದ್ದಾರೆ.