Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

ಬಿಜೆಪಿ ಸರ್ಕಾರ ಕೈಗೊಂಡಿದ್ದ ಎಲ್ಲಾ ಇಲಾಖೆಗಳ ಕಾಮಗಾರಿಗಳಿಗೆ ತಡೆ : ರಾಜ್ಯ ಸರ್ಕಾರದಿಂದ ಆದೇಶ

0

ಬೆಂಗಳೂರು : ಈ ಹಿಂದಿನ ಬಿಜೆಪಿ ಸರ್ಕಾರ ಕೈಗೊಂಡಿದ್ದ ಎಲ್ಲಾ ಇಲಾಖೆಗಳ ಕಾಮಗಾರಿಗೆ ತಡೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆಹಾಗೂ ಇಲಾಖೆಗಳ ಅಧೀನಕ್ಕೊಳಪಡುವ ನಿಗಮ ಮಂಡಳಿ/ಪ್ರಾಧಿಕಾರಗಳ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಎಲ್ಲಾ ಮುಂದಿನ ಹಣ ಬಿಡುಗಡೆ/ಪಾವತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆ ಹಿಡಿಯಲು ಹಾಗೂ ಪ್ರಾರಂಭವಾಗದಿರುವ ಎಲ್ಲಾ ಕಾಮಗಾರಿಗಳನ್ನು ಸಹ ತಡೆ ಹಿಡಿಯಲು ತಿಳಿಸಲಾಗಿದೆ.

ಇಂದು ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಸಿಎಂ ಸಿದ್ದರಾಮಯ್ಯ

 

ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ಏಕ್ ರೂಪ್ ಕೌರ್ ಆದೇಶ ಹೊರಡಿಸಿದ್ದು, ಮುಖ್ಯಮಂತ್ರಿಗಳ ನಿರ್ದೇಶನದಂತೆ, ಈ ಹಿಂದಿನ ಸರ್ಕಾರ ಕೈಗೊಂಡಿದ್ದ ಎಲ್ಲಾ ಇಲಾಖೆಗಳ ಹಾಗೂ ಇಲಾಖೆಗಳ ಅಧೀನಕ್ಕೊಳಪಡುವ ನಿಗಮ ಮಂಡಳಿ/ಪ್ರಾಧಿಕಾರಗಳ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಎಲ್ಲಾ ಮುಂದಿನ ಹಣ ಬಿಡುಗಡೆ/ಪಾವತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆ ಹಿಡಿಯಲು ಹಾಗೂ ಪ್ರಾರಂಭವಾಗದಿರುವ ಎಲ್ಲಾ ಕಾಮಗಾರಿಗಳನ್ನು ಸಹ ತಡೆ ಹಿಡಿಯಲು ತಿಳಿಸಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.

Leave A Reply

Your email address will not be published.