Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಬಿರುಗಾಳಿಗೂ ಮುಂಚೆ ಬರುವ ಗುಡುಗು ನಯನತಾರಾ!

0

ಶಾರುಖ್ ಖಾನ್ ಅಭಿನಯದ ‘ಜವಾನ್’ ಚಿತ್ರದ ಪ್ರಿವ್ಯೂ, ವೈರಲ್ ಆಗಿರುವ ಬೆನ್ನಲ್ಲೇ ಚಿತ್ರದಲ್ಲಿನ ನಯನತಾರಾ ಪಾತ್ರದ ಪೋಸ್ಟರನ್ನು ಶಾರುಖ್ ಖಾನ್ ಬಿಡುಗಡೆ ಮಾಡಿದ್ದಾರೆ. ನಯನತಾರಾ ಪಾತ್ರವನ್ನು ‘ಬಿರುಗಾಳಿಗೂ ಮುಂಚೆ ಬರುವ ಗುಡುಗು’ ಎಂದು ಶಾರುಖ್ ಖಾನ್ ವರ್ಣಿಸಿದ್ದು, ಆಕೆಯ ಪಾತ್ರದ ಬಗ್ಗೆ ಇನ್ನಷ್ಟು ಕುತೂಹಲ ಹೆಚ್ಚಾಗಿದೆ. ಇದೇ ಮೊದಲ ಬಾರಿಗೆ ಶಾರುಖ್ ಖಾನ್ ಮತ್ತು ನಯನತಾರಾ, ಈ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದಾರೆ. ‘ಜವಾನ್’ನಲ್ಲಿ ನಯನತಾರಾ, ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದು, ಅವರ ಪಾತ್ರ ಇಡೀ ಚಿತ್ರದ ಹೈಲೈಟ್ ಆಗಲಿದೆ ಎಂದು ಹೇಳಲಾಗುತ್ತಿದೆ. ಚಿತ್ರದಲ್ಲಿ ಸಾಕಷ್ಟು ಸಾಹಸಮಯ ದೃಶ್ಯಗಳಲ್ಲಿ ನಯನತಾರಾ ಕಾಣಿಸಿಕೊಂಡಿದ್ದಾರೆ. ‘ಜವಾನ್’ ಚಿತ್ರವನ್ನು ರೆಡ್ ಚಿಲ್ಲೀಸ್ ಎಂಟರ್ಟೈನ್ಮೆಂಟ್ ಅಡಿಯಲ್ಲಿ ಗೌರಿ ಖಾನ್ ನಿರ್ಮಿಸಿದ್ದು, ದಕ್ಷಿಣ ಭಾರತದ ಜನಪ್ರಿಯ ನಿರ್ದೇಶಕರಾದ ಅಟ್ಲಿ ನಿರ್ದೇಶನ ಮಾಡಿದ್ದಾರೆ.

Leave A Reply

Your email address will not be published.