ಬೆಂಗಳೂರು: ಕೊರಮಂಗಲದ ಫೋರಂ ಮಾಲ್ ಮುಂಭಾಗದಲ್ಲಿರುವ ಮಾರುತಿ ಕಾರು ಷೋ ರೂಂನ ನಾಲ್ಕನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಪ್ರಾಣ ಉಳಿಸಿಕೊಳ್ಳಲು ವ್ಯಕ್ತಿಯೊಬ್ಬರು 4ನೇ ಮಹಡಿಯಿಂದ ಜಿಗಿದಿರುವ ಘಟನೆ ನಡೆದಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುತ್ತಿದ್ದಾರೆ. ನಾಲ್ಕು ಮಹಡಿಯ ಕಟ್ಟಡದಲ್ಲಿ, ಗ್ರೌಂಡ್ ಮತ್ತು ಮೊದಲ ಮಹಡಿಯಲ್ಲಿ ಕಾರು ಷೋ ರೂಂ ಇದೆ.
ಇನ್ನು ಎರಡು ಮತ್ತು ಮೂರನೇ ಮೂರನೇ ಮಹಡಿಯಲ್ಲಿ ಹುಕ್ಕಾ ಬಾರ್ ನಡೆಸಲಾಗುತ್ತಿದ್ದು, ಮಡ್ ಪೈಪ್ ಹುಕ್ಕಾ ಕೆಫೆನಲ್ಲಿ ಧಿಡೀರನೆ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರಾಣ ಉಳಿಸಿಕೊಳ್ಳಲು ನಾಲ್ಕನೇ ಮಹಡಿಯಿಂದ ಓರ್ವ ವ್ಯಕ್ತಿ ಗಿಡದ ಮೇಲೆ ಜಿಗಿದಿದ್ದು, ಗಾಯಗಳಾಗಿವೆ.
ಗಾಯಗೊಂಡಿರುವ ವ್ಯಕ್ತಿಯನ್ನು ಕೊರಮಂಗಲದ ಸೈಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

































