ಬೆಂಗಳೂರು: ರಾಜ್ಯದಲ್ಲಿ ಡೆಂಘೀ ಓಟಕ್ಕೆ ಬ್ರೇಕ್ ಹಾಕಲು ಆರೋಗ್ಯ ಇಲಾಖೆ ಹರಸಾಹಸ ಪಡುತ್ತಿದ್ದು, ಇಲ್ಲಿಯವರೆಗೂ ರಾಜ್ಯದಲ್ಲಿ 6300ಕ್ಕೂ ಹೆಚ್ಚು ಕೇಸ್ ವರದಿಯಾಗಿದೆ. ಕಳೆದ ಎರಡು ದಿನದ ಹಿಂದೆ ಬಿಬಿಎಂಪಿ ಸೇರಿದಂತೆ ಆರೋಗ್ಯಾಧಿಕಾರಿಗಳ ಜೊತೆ ಸಭೆ ನಡೆಸಿದ್ದು ಇಂದು ಬೇರೆ ಬೇರೆ ಜಿಲ್ಲೆಗಳ ಡಿಸಿ ಹಾಗೂ ಡಿಹೆಚ್ಓಗಳ ಜೊತೆ ಸಚಿವರು ಮೀಟಿಂಗ್ ನಡೆಸಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಸಚಿವ ದಿನೇಶ್ ಗುಂಡೂರಾವ್ ಸಭೆಯಲ್ಲಿ ಭಾಗಿಯಾಗಲಿದ್ದು ಮಧ್ಯಾಹ್ನ 3.30ಕ್ಕೆ ವಿಕಾಸ ಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಡಿಸಿ ಹಾಗೂ ಡಿಹೆಚ್ಓಗಳ ಬಳಿ ಡೆಂಘೀ ಬಗ್ಗೆ ಸಚಿವರು ಮಾಹಿತಿ ಪಡೆದುಕೊಳ್ಳಲಿದ್ದು, ನಂತರ ಜಿಲ್ಲೆಗಳಲ್ಲಿ ಡೆಂಘೀ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.
