ಬೆಂಗಳೂರು: ಉಗ್ರ ಟಿ ನಜೀರ್ ಜೈಲಿನಲ್ಲಿ ವಿಲಾಸಿ ಜೀವನ ನಡೆಸಲು ಕೊಂಡಿಯಾಗಿದ್ದವನು ಜೈಲಿನ ಬಳಿ ಇದ್ದ ಜನರಲ್ ಸ್ಟೋರ್ ಮಾಲೀಕ ಎನ್ನುವುದು ತನಿಖೆ ವೇಳೆ ಪತ್ತೆಯಾಗಿದೆ. ನಾಜಿರ್ ಜೈಲಿನಲ್ಲಿ ಕುಳಿತು ಮೊಬೈಲ್ ಬಳಕೆ ಮಾಡಿರೋದು, ತನಗಿಷ್ಟ ಬಂದವರನ್ನ ತನ್ನ ರೂಮಿಗೆ ಹಾಕಿಸಿಕೊಳ್ಳೊಕೆ ಜೈಲು ಅಧಿಕಾರಿ ಮತ್ತು ಸಿಬ್ಬಂದಿಗೆ ಲಕ್ಷ ಲಕ್ಷ ಹಣ ಖರ್ಚು ಮಾಡಿದ್ದಾನೆ. ಉಗ್ರ ಸಂಘಟನೆಯಿಂದ ಬರುತ್ತಿದ್ದ ಹಣವನ್ನ ಜೈಲಿನ ಬಳಿಯಿದ್ದ ಜನಲರ್ ಸ್ಟೋರ್ ಮಾಲೀಕನ ಮೂಲಕ ಜೈಲು ಅಧಿಕಾರಿ ಸಿಬ್ಬಂದಿಗೆ ಸಪ್ಲೈ ಆಗ್ತಿದೆ ಅನ್ನೋದನ್ನ ಸಿಸಿಬಿ ಪತ್ತೆ ಮಾಡಿದೆ. ಇನ್ನು ಶೀಘ್ರದಲ್ಲೇ ಆ ಜನರಲ್ ಸ್ಟೋರ್ ಮಾಲೀಕ ಕಮಿಷನ್ ಪಡೆದು ಹಣದ ವ್ಯವಹಾರ ನಡೆಸಿರುವ ಹಿನ್ನೆಲೆ ಆತನನ್ನು ಸಿಸಿಬಿ ವಶಕ್ಕೆ ಪಡೆಯೋ ಸಾಧ್ಯತೆಯಿದೆ. ಇತ್ತ ಸ್ಫೋಟಕಕ್ಕೆ ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರ ಪ್ರಕರಣ ಎನ್‌ಐಗೆ ವರ್ಗಾವಣೆಯಾಗೋ ಸಾಧ್ಯತೆಯಿದೆ. ಸಿಸಿಬಿ ವಿಚಾರಣೆ ಮುಗಿದಿದ್ದು ಆರೋಪಿಗಳನ್ನು ಈಗಾಗಲೇ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಎನ್‌ಐಎ ಅಧಿಕಾರಿಗಳು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಿದ್ದಾರೆ. ರಾಷ್ಟ್ರೀಯ ತನಿಖಾ ದಳ ಈಗಾಗಲೇ ಪ್ರಕರಣದ ಬಗ್ಗೆ ಸಿಸಿಬಿಯಿಂದ ಪ್ರಾಥಮಿಕ ಮಾಹಿತಿ ಪಡೆದಿದೆ. ಶಂಕಿತರ ಬಳಿ ಪತ್ತೆಯಾದ ಗ್ರೆನೇಡ್, ನಾಡ ಪಿಸ್ತೂಲ್ಗಳ ಬಗ್ಗೆ ಎನ್‌ಐಎ ನಿಗಾ ಇಟ್ಟಿದೆ. ಈ ಹಿನ್ನೆಲೆಯಲ್ಲಿ ಶಂಕಿತ ಉಗ್ರರ ಒಳಸಂಚು ಮತ್ತು ಷಡ್ಯಂತ್ರ ಬಗ್ಗೆ ವಿಚಾರಣೆ ನಡೆಸಲಿದೆ.
[vc_row][vc_column]
BREAKING NEWS
- ಮದುವೆಯಲ್ಲಿ ಕೈತಪ್ಪಿ ಅತಿಥಿಗಳ ಮೇಲೆ ಬಿದ್ದ ಮುಸುರೆ ತಟ್ಟೆಗಳು – ವೇಟರ್ನನ್ನು ಕೊಂದು, ಪೊದೆಗೆ ಎಸೆದ ಪಾಪಿಗಳು ಅರೆಸ್ಟ್
- ಬಿಜೆಪಿ ಮುಖಂಡ ಮಣಿಕಂಠ ರಾಥೋಡ್ ಸುದ್ದಿಗೋಷ್ಠಿಗೂ ಮುನ್ನ ಪೊಲೀಸ್ ವಶಕ್ಕೆ
- ಯುನೆಸ್ಕೋದ ಸಾಂಸ್ಕೃತಿಕ ಪರಂಪರೆಯ ಪಟ್ಟಿಗೆ ಸೇರಿದ ಗಾರ್ಬಾ ನೃತ್ಯ
- ‘ಗೊಡ್ಡು ಬೆದರಿಕೆಗಳಿಗೆ ಹೆದರುವ ಪಕ್ಷ ಬಿಜೆಪಿ ಅಲ್ಲ’- ಬಿ.ವೈ.ವಿಜಯೇಂದ್ರ
- ಲಾರಿ – ಟಾಟಾ ಏಸ್ ನಡುವೆ ಭೀಕರ ಅಪಘಾತ-ನಾಲ್ವರು ಸಾವು
- ಜೈನಮುನಿ ಹತ್ಯೆ ಪ್ರಕರಣ-500ಕ್ಕೂ ಹೆಚ್ಚು ಪುಟಗಳ ಚಾರ್ಜ್ಶೀಟ್ ನ್ಯಾಯಾಲಯಕ್ಕೆ ಸಲ್ಲಿಕೆ
- ದೈವಾರಾಧನೆ ನಮ್ಮ ನೆಲದ ಸಂಸ್ಕೃತಿ ಅದಕ್ಕೆ ಅವಮಾನ ಮಾಡಬೇಡಿ –ರಿಷಬ್ ಶೆಟ್ಟಿ
- ವರದಕ್ಷಿಣೆ ದಾಹಕ್ಕೆ ಬಲಿಯಾದರೆ ಯುವ ವ್ಯದ್ಯೆ ?
- ನಿಮ್ಮ ಪ್ಯಾನ್ ಕಾರ್ಡ್ ಕಳೆದು ಹೋಗಿದ್ಯಾ..? ಡೂಪ್ಲಿಕೇಟ್ ಕಾರ್ಡ್ ಪಡೆಯಲು ಹೀಗೆ ಮಾಡಿ
- ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಡಿಸೆಂಬರ್ 9ರಂದು ದೇವರ ದರ್ಶನ ಸಮಯದಲ್ಲಿ ಬದಲಾವಣೆ