ಬೆಂಗಳೂರು : ವಿಮಾನದಲ್ಲಿ ಪ್ರಯಾಣ ಮಾಡುವಾಗ ಗಗನಸಖಿ ಜೊತೆ ಅಸಭ್ಯವಾಗಿ ವರ್ತಿಸಿ ನಿನ್ನ ರೇಟ್ ಎಷ್ಟು ಎಂದು ಕೇಳಿ ಲೈಂಗಿಕ ಕಿರುಕುಳ ನೀಡಿದ್ದ ಮಾಲ್ಡೀವ್ಸ್ ಪ್ರಜೆಯನ್ನ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ. 33 ವರ್ಷದ ಗಗನ ಸಖಿ ನೀಡಿದ ದೂರಿನನ್ವಯ ಮಾಲ್ಡೀವ್ಸ್ ಮೂಲದ 51 ವರ್ಷದ ಅಕ್ರಂ ಅಹಮದ್ ಬಂಧಿಸಲಾಗಿದೆ. ಆಗಸ್ಟ್ 18ರಂದು ಮಾಲೆಯಿಂದ ಬೆಂಗಳೂರಿಗೆ ಬಂದಿದ್ದ ವಿಮಾನದಲ್ಲಿ ಪ್ರಯಾಣಿಸಿದ್ದ ಆರೋಪಿ, ಕ್ಯಾಬಿನ್ ಕ್ರೂ ಯುವತಿಯನ್ನ ಕರೆದು ಬಿಯರ್ ಹಾಗೂ ಗೋಡಂಬಿ ಕೇಳಿದ್ದ. ಸರ್ವ್ ಮಾಡುವ ಸಂದರ್ಭದಲ್ಲಿ 51 ವರ್ಷಗಳಿಂದಲೂ ನಿನ್ನಂತೆ ಇರುವ ಹುಡುಗಿಯನ್ನ ಹುಡುಕುತ್ತಿದ್ದೇನೆ. 10 ಡಾಲರ್ ಬದಲು 100 ಡಾಲರ್ ಕೊಡುತ್ತೇನೆ. ಉಳಿದ ಹಣ ನೀನೇಇಟ್ಟುಕೋ ಎಂದು ಆಕೆಯ ದೇಹವನ್ನ ಅಸಭ್ಯವಾಗಿ ಸ್ಪರ್ಶಿಸಿದ್ದ. ಮತ್ತೋರ್ವ ಮಹಿಳಾ ಸಿಬ್ಬಂದಿ ಹಣ ಕೇಳಲು ಹೋದಾಗ ಆರೋಪಿಯು ಹಣ ಹುಡುಕುವ ನೆಪದಲ್ಲಿ ತನ್ನ ಪ್ಯಾಂಟ್ ನೊಳಗೆ ಕೈ ಹಾಕಿಕೊಂಡು ಕೆಟ್ಟದಾಗಿ ವರ್ತಿಸಿದ್ದ. ವಿಮಾನ ಲ್ಯಾಂಡಿಂಗ್ ಸಂದರ್ಭದಲ್ಲಿಯೂ ಸಹ ಎರಡು ಮೂರು ಬಾರಿ ಆಸನದಿಂದ ಎದ್ದು ನಿಂತಿದ್ದು, ಕುಳಿತುಕೊಳ್ಳುವಂತೆ ಸೂಚಿಸಿದಾಗ ನನಗೆ ಒರಟು ವಸ್ತುಗಳು ಇಷ್ಟ, ನೀನು ತುಂಬಾ ಒರಟು ಎಂದು ಅಸಭ್ಯವಾಗಿ ವರ್ತಿಸಿದ್ದ ಎಂದು ನೊಂದ ಗಗನ ಸಖಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನ ಬಂಧಿಸಲಾಗಿದೆ. ಬ್ಯುಸಿನೆಸ್ ವೀಸಾದಲ್ಲಿ ಆರೋಪಿ ಭಾರತಕ್ಕೆ ಬಂದಿದ್ದ ಎಂದು ತಿಳಿದು ಬಂದಿದೆ.
[vc_row][vc_column]
BREAKING NEWS
- ಉದ್ಯೋಗಿಯಿಂದ ಮಹಾನ್ ಎಡವಟ್ಟು – ಮೈಕ್ರೋಸಾಫ್ಟ್ ನ 32ಟಿಬಿ ಮಾಹಿತಿ ಸೋರಿಕೆ
- ವಂಚನೆ ಪ್ರಕರಣ – ಚೈತ್ರಾ ಸೇರಿ 7 ಮಂದಿಗೆ ಅ. 6ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ
- ನಿಂಜಾ ಪ್ರಶಸ್ತಿ ಪಡೆದ 71 ವರ್ಷದ ಮಹಿಳೆಯ ಗಿನ್ನಿಸ್ ದಾಖಲೆ!
- ಹೊಸ ಐಫೋನ್ ಖರೀದಿಗೆ ಮುಗಿಬಿದ್ದ ಜನ – ಈ ಫೋನ್ ನಲ್ಲಿ ಅಂಥಾದ್ದೇನಿದೆ?
- ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಕುರಿತ ಸ್ಪೋಟಕ ಮಾಹಿತಿ ಬಹಿರಂಗ?
- ಸನಾತನ ಧರ್ಮದ ಬಗ್ಗೆ ಮಾತನಾಡಿದ್ದಕ್ಕೆ ಚಿಕ್ಕಮಗುವನ್ನು ಬೇಟೆಯಾಡುತ್ತಿದ್ದಾರೆ -ಕಮಲ್ ಹಾಸನ್
- ಮುಂಬೈ ಜಿಎಸ್ ಬಿ ಗಣೇಶೋತ್ಸವದಲ್ಲಿ ಪಾಲ್ಗೊಂಡ ಕರಾವಳಿ ಬೆಡಗಿ ನಟಿ ಪೂಜಾ ಹೆಗ್ಡೆ
- ಎತ್ತಿನಹೊಳೆ ಯೋಜನೆ Out dated subject – ಮಾಜಿ ಸಿಎಂ ವೀರಪ್ಪ ಮೊಯಿಲಿ..!
- ಬೆಂಗಳೂರಿನಲ್ಲಿ ಮೊದಲ ಬಾರಿಗೆ ಕಂಬಳ – ಅಶೋಕ್ ರೈ ನೇತೃತ್ವದಲ್ಲಿ ಸ್ಥಳ ಪರಿಶೀಲನೆ
- ಮುದ್ರಾಂಕ ಇಲಾಖೆಯ ವೆಬ್ಸೈಟ್ಗೆ ಕನ್ನ – ಎಇಪಿಎಸ್ ಮೂಲಕ ಒಂದು ಲಕ್ಷ ರೂ. ವಂಚನೆ?