ಗಾಂಜಾ ಮಿಶ್ರಿತ ಚಾಕಲೇಟ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ಆರ್‍ಎಂಸಿ ಯಾರ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು : ಗಾಂಜಾ ಮಿಶ್ರಿತ ಚಾಕಲೇಟ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ಆರ್‍ಎಂಸಿ ಯಾರ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯಿಂದ 225 ಕೆ.ಜಿ ಗಾಂಜಾ ಮತ್ತು ಮೊಬೈಲ್ ವಶಪಡಿಸಿಕೊಂಡಿದ್ದಾರೆ.
ಆರೋಪಿ ಉತ್ತರಪ್ರದೇಶದ ಖಾನಾಪುರದಲ್ಲಿನ ವ್ಯಕ್ತಿಯೊಬ್ಬರಿಂದ ಟ್ರಾನ್ಸ್ ಪೋರ್ಟ್ ಮೂಲಕ ಚಾಕಲೇಟ್ ರೂಪದಲ್ಲಿ ಗಾಂಜಾ ಮಿಶ್ರಿತ ಚಾಕಲೇಟ್‍ಗಳನ್ನು ತರಿಸಿಕೊಂಡು ನಗರದಲ್ಲಿ ಮಾರಾಟ ಮಾಡುತ್ತಿದುದ್ದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ.
ಉತ್ತರ ವಿಭಾಗದ ಉಪಪೊಲೀಸ್ ಆಯುಕ್ತ ಶಿವಪ್ರಕಾಶ್ ದೇವರಾಜು ಅವರ ಮಾರ್ಗದರ್ಶನದಲ್ಲಿ ಪೀಣ್ಯ ಉಪವಿಭಾಗದ ಎಸಿಪಿ ಸದಾನಂದ ಎ.ತಿಪ್ಪಣ್ಣನವರ್, ಇನ್‍ಸ್ಪೆಕ್ಟರ್ ಸುರೇಶ್ ನೇತೃತ್ವದಲ್ಲಿ ಸಿಬ್ಬಂದಿ ತಂಡ ಕಾರ್ಯಾಚರಣೆ ನಡೆಸಿದ್ದು ಪ್ರಕರಣದ ತನಿಖೆ ಪ್ರಗತಿಯಲ್ಲಿದೆ.