ದೇವನಹಳ್ಳಿ: ಚಿನ್ನದ ಬಿಸ್ಕೆಟ್ಗಳನ್ನ ಗುದನಾಳದಲ್ಲಿ ಮರೆಮಾಚಿ ಕಳ್ಳಸಾಗಾಣಿಕೆಗೆ ಯತ್ನಿಸಿದ ಪ್ರಯಾಣಿಕ ಬೆಂಗಳೂರಿನ ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ. ಬಂಧಿತ ಆರೋಪಿಯಿಂದ 600 ಗ್ರಾಂ ಚಿನ್ನವನ್ನ ವಶಕ್ಕೆ ಪಡೆಯಲಾಗಿದೆ. ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ಗೆ ಆಗಸ್ಟ್ 15 ರಂದು ಕೋಲ್ಕತ್ತಾದಿಂದ ಬಂದ ಏರ್ ಏಷ್ಯಾದ 15 1536 ಸಂಖ್ಯೆಯ ವಿಮಾನದಲ್ಲಿ ಬಂದಿಳಿದ್ದಿದ್ದಾನೆ. ವಿಮಾನದಲ್ಲಿನ ಪ್ರಯಾಣಿಕನೊಬ್ಬ ಅಕ್ರಮವಾಗಿ ಚಿನ್ನ ಸಾಗಿಸುತ್ತಿರುವ ಖಚಿತ ಮಾಹಿತಿ ಆದಾಯ ತೆರಿಗೆ ಇಲಾಖೆಯ ವಾಯು ಗುಪ್ತಚರ ಘಟಕದ ಅಧಿಕಾರಿಗಳಿಗೆ ಸಿಕ್ಕಿದೆ. ವಿಮಾನ ನಿಲ್ದಾಣದಲ್ಲಿ ಆತನನ್ನ ವಶಕ್ಕೆ ಪಡೆದ ಅಧಿಕಾರಿಗಳು ವಿಚಾರಣೆ ನಡೆಸಿ ತಪಾಸಣೆ ನಡೆಸಿದ್ದಾರೆ. ಆಗ ಆತ ತನ್ನ ಗುದನಾಳದಲ್ಲಿ ಚಿನ್ನದ ಬಿಸ್ಕೆಟ್ಗಳನ್ನ ಮರೆಮಾಚಿ ಕಳ್ಳಸಾಗಣೆ ಮಾಡುತ್ತಿರುವುದು ಪತ್ತೆಯಾಗಿದೆ. ಆರೋಪಿಯನ್ನ ವಶಕ್ಕೆ ಪಡೆಯಲಾಗಿದ್ದು 600 ಗ್ರಾಂ ತೂಕದ 30 ಚಿನ್ನದ ಬಿಸ್ಕೆಟ್ ಗಳನ್ನ ವಶಕ್ಕೆ ಪಡೆಯಲಾಗಿದೆ.
[vc_row][vc_column]
BREAKING NEWS
- ‘ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ನ ಲೆಕ್ಕಾಚಾರದ ತಂತ್ರಗಳು ಕೆಲಸ ಮಾಡುವುದಿಲ್ಲ’- ಬಿಎಸ್ವೈ
- ಬೆಳಗಾವಿ : ಮಂತ್ರಿಗಳೆಲ್ಲ ತೆಲಂಗಾಣಕ್ಕೆ ಹೋಗಿ ಅಲ್ಲಿನ ಎಂಎಲ್ಎ ಗಳ ಸೇವೆ ಮಾಡ್ತಿದ್ದಾರೆ – ವಿಪಕ್ಷ ನಾಯಕ ಆರ್ ಅಶೋಕ ಕಿಡಿ
- 10 ಮಂದಿ ಬಿಜೆಪಿ ಸಂಸದರು ಸಂಸತ್ ಸ್ಥಾನಗಳಿಗೆ ರಾಜೀನಾಮೆ
- ಸರಕಾರಿ ಹುದ್ದೆಗಳ ನೇಮಕಾತಿ ಅಕ್ರಮ ತಡೆಗಟ್ಟಲು ವಿಧೇಯಕ ಮಂಡನೆ
- ಉಧಂಪುರ ದಾಳಿ ಸಂಚುಕೋರ, 26/11 ಮಾಸ್ಟರ್ ಮೈಂಡ್ ಹಫೀಜ್ ಸಯೀದ್ನ ಸಹಾಯಕ ಪಾಕ್ನಲ್ಲಿ ಹತ್ಯೆ
- ಕೊನೆಗೂ ಉರ್ಫಿ ಜಾವೇದ್ ಇನ್ಸ್ಟಾಗ್ರಾಮ್ ಅಕೌಂಟ್ ಡಿಲೀಟ್
- ‘ತೊಡೆಯ ಮೇಲೆ ಕೂರಿಸಿಕೊಂಡು ಮುದ್ದಾಡುತ್ತಿದ್ದವರು ಈಗ ಮುಸ್ಲಿಂ ದ್ವೇಷಿ’- ಹೆಚ್ಡಿಕೆಗೆ ದಿನೇಶ್ ಗುಂಡೂರಾವ್ ಟಾಂಗ್
- ಕೊಳವೆ ಬಾವಿಗೆ ಬಿದ್ದ ಬಾಲಕಿ ಚಿಕಿತ್ಸೆ ಫಲಿಸದೆ ಮೃತ್ಯು
- ಗುರಿ ತಪ್ಪಿದ ಸೇನಾ ಡ್ರೋನ್ ದಾಳಿ; 85 ಮಂದಿ ನಾಗರಿಕರು ಮೃತ್ಯು
- ಪ್ಯಾಕಿಂಗ್ ಆಹಾರ ಉತ್ಪನ್ನಗಳಿಂದ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆ ಹೆಚ್ಚಾಗಿ ಕಾಣಿಸುತ್ತದೆ – ಏಮ್ಸ್ ವರದಿ