Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

ಬೆಂಗಳೂರು: ನಾಳೆ 28 ಶಾಸಕರು ಸಚಿವರಾಗಿ ಪದಗ್ರಹಣ ಸಾಧ್ಯತೆ

0

ಬೆಂಗಳೂರು: ಸಿದ್ದರಾಮಯ್ಯ ಸಿಎಂ, ಡಿ.ಕೆ.ಶಿವಕುಮಾರ್‌ ಉಪಮುಖ್ಯಮಂತ್ರಿಯಾಗಿ ಮೇ 20ರಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನ ಹೈಕಮಾಂಡ್ ಹಾಗೂ ದೇಶದ ಹಲವು ಘಟಾನುಘಟಿ ರಾಜಕೀಯ ಮುಖಂಡರು ಹಾಜರಿರುವ ಸಾಧ್ಯತೆ ಇದೆ.

ಸಿದ್ದು ಮತ್ತು ಡಿಕೆ ಇವರಿಬ್ಬರ ಪದಗ್ರಹಣ ಮಾತ್ರ ಬೇಡ, ಇವರೊಂದಿಗೆ ಸಚಿವರು ಪ್ರಮಾಣ ವಚನ ತೆಗೆದುಕೊಳ್ಳಲಿ ಎಂದ ಕಾರಣ ಇವರ ಜೊತೆಗೆ ಕೆಲವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಸುಮಾರು 28 ಮಂದಿ ಶಾಸಕರು ಸಚಿವರಾಗಿ ಪದಗ್ರಹಣ ಸಾಧ್ಯತೆ ಇದೆ. ಆದ್ರೆ ಎಷ್ಟು ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಾರೆ ಎನ್ನುವುದೇ ಕೈ ನಾಯಕರು ಗುಟ್ಟಾಗೇ ಇಟ್ಟಿದ್ದಾರೆ. ಸಚಿವ ಸ್ಥಾನಕ್ಕೆ ಕಾಂಗ್ರೆಸ್​ನಲ್ಲಿ 80ಕ್ಕೂ ಹೆಚ್ಚು ಮಂದಿ ಆಕಾಂಕ್ಷಿಗಳಿದ್ದಾರೆ. ಯಾರಿಗೆ ಹೈಕಮಾಂಡ್ ಮಣೆ ಹಾಕುತ್ತೆ ನೋಡಬೇಕು.

ದಲಿತರನ್ನು ಉಪಮುಖ್ಯಮಂತ್ರಿ ಸ್ಥಾನ ನೀಡದಿದ್ದರೆ ಕಾಂಗ್ರೆಸ್‌ಗೆ ಸಂಕಷ್ಟ: ಜಿ ಪರಮೇಶ್ವರ್ ಎಚ್ಚರಿಕೆ

‘ಕೈ’ ಸಂಭಾವ್ಯ ಸಚಿವರ ಪಟ್ಟಿ

ಬೆಂಗಳೂರು ಬಿಟ್ಟರೆ ಅತಿ ಹೆಚ್ಚು ವಿಧಾನಸಭೆ ಕ್ಷೇತ್ರಗಳನ್ನು ಬೆಳಗಾವಿ ಜಿಲ್ಲೆ ಹೊಂದಿದೆ. ಈ ಬಾರಿ ಕಾಂಗ್ರೆಸ್ ಒಟ್ಟು ಜಿಲ್ಲೆಯ 18 ಕ್ಷೇತ್ರಗಳ ಪೈಕಿ 11ರಲ್ಲಿ ಗೆದ್ದು ಬೀಗಿದೆ. ಹೀಗಾಗಿ ಈ ಸಲ ಬೆಳಗಾವಿ ಜಿಲ್ಲೆಗೆ ಮೂರು ಸಚಿವ ಸ್ಥಾನಗಳನ್ನು ನೀಡಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಪ್ರಮುಖವಾಗಿ ಆ ಮೂವರು ಯಾರು ಅಂದರೆ ಬಿಜೆಪಿ ತೊರೆದು ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದಿರುವ ಲಕ್ಷ್ಮಣ ಸವದಿ, ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಸತತ ಎರಡನೇ ಬಾರಿ ಗೆದ್ದಿರುವ ಲಕ್ಷ್ಮಿ ಹೆಬ್ಬಾಳ್ಕರ್ ಹೆಬ್ಬಾಳ್ಕರ್​ ಅವರಿಗೆ ಮಹಿಳಾ ಕೋಟಾದಲ್ಲಿ ಸಚಿವ ಸ್ಥಾನ ಲಭಿಸುವ ಸಾಧ್ಯತೆಗಳು ಹೆಚ್ಚಿವೆ. ಇನ್ನು ಕಾಂಗ್ರೆಸ್​ ಹಿರಿಯ ನಾಯಕ, ಕೆಪಿಸಿಸಿ ಕಾರ್ಯಧ್ಯಕ್ಷ ಬೆಳಗಾವಿಯಲ್ಲಿ ಹಿಡಿತ ಸಾಧಿಸಿರುವ ಸತೀಶ್ ಜಾರಕಿಹೊಳಿ ಅವರಿಗೂ ಪ್ರಮುಖ ಖಾತೆ ಸಿಗುವುದು ಖಚಿತವಾಗಿದೆ.

ಇನ್ನು ಬೆಂಗಳೂರ ನಗರ ಜಿಲ್ಲೆಯಲ್ಲಿ ಕೆ.ಜೆ. ಜಾರ್ಜ್, ರಾಮಲಿಂಗಾರೆಡ್ಡಿ, ಹ್ಯಾರಿಸ್, ದಿನೇಶ್ ಗುಂಡೂರಾವ್, ಜಮೀರ್ ಅಹಮ್ಮದ್ ಖಾನ್​ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆಗಳಿವೆ. ಇನ್ನುಳಿದಂತೆ ಆರ್.ಬಿ.ತಿಮ್ಮಾಪುರ್, ಎಂ.ಬಿ. ಪಾಟೀಲ್, ಕೆ.ಎಚ್. ಮುನಿಯಪ್ಪ, ಪ್ರಿಯಾಂಕ್ ಖರ್ಗೆ, ಅಜಯ್ ಸಿಂಗ್, ಈಶ್ವರ್ ಖಂಡ್ರೆ. ಹೆಚ್.ಕೆ.ಪಾಟೀಲ್, ಭೀಮಣ್ಣ ನಾಯಕ, ಎಸ್​ಎಸ್​ ಮಲ್ಲಿಕಾರ್ಜುನ, ರುದ್ರಪ್ಪ ಲಮಾಣಿ , ನಾಗೇಂದ್ರ, ಮಧು ಬಂಗಾರಪ್ಪ, ಯು.ಟಿ. ಖಾದರ್, ಬಿ.ಕೆ. ಹರಿಪ್ರಸಾದ್, ಸಲೀಂ ಅಹಮದ್ ಸೇರಿ ಪ್ರಮುಖರ ಹಸರು ಪಟ್ಟಿಯಲ್ಲಿದೆ ಎಂದು ಹೇಳಲಾಗಿದೆ.

ಒಟ್ಟಿನಲ್ಲಿ ಕೈ ಪಾಳಯದಲ್ಲಿ ಸಚಿವ ಸ್ಥಾನಕ್ಕೆ ಜಿದ್ದಾಜಿದ್ದಿನ ಪೈಪೋಟಿ ನಡೆಯುತ್ತಿದೆ. ಆದ್ರೆ ಯಾರಿಗೆ ಅದೃಷ್ಟ ಒಲಿಯಲಿದೆ ಎಂದು ಕಾದು ನೋಡಬೇಕಿದೆ.

Leave A Reply

Your email address will not be published.