Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಬೆಂಗಳೂರು: ಲಕ್ಷ್ಮಣ ಸವದಿ, ಶೆಟ್ಟರ್‌ಗೆ ‘ಕೈ’ ಕೊಟ್ಟ ಕಾಂಗ್ರೆಸ್‌ ವರಿಷ್ಠರು.!

0

ಬೆಂಗಳೂರು: ಚುನಾವಣೆಯ ಕೊನೆ ಕ್ಷಣದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿರುವ ಲಿಂಗಾಯತ ಸಮುದಾಯದ ಪ್ರಬಲ ನಾಯಕರಾದ ಜಗದೀಶ್‌ ಶೆಟ್ಟರ್‌ ಹಾಗೂ ಲಕ್ಷ್ಮಣ ಸವದಿ ಅವರಿಗೆ ಈ ಬಾರಿ ಮಂತ್ರಿ ಸ್ಥಾನ ನೀಡಬಹುದು ಎನ್ನುವ ನಿರೀಕ್ಷೆಯಿತ್ತು.

ಆದರೆ, ಕಾಂಗ್ರೆಸ್‌ ಹೈಕಮಾಂಡ್‌ ಉತ್ತರ ಕರ್ನಾಟಕ ಭಾಗದ ಈ ಇಬ್ಬರು ಪ್ರಬಲ ನಾಯಕರಿಗೂ ಮಂತ್ರಿ ಸ್ಥಾನ ನೀಡದೆ ಶಾಕ್‌ ಕೊಟ್ಟಿದೆ. ಅದರಲ್ಲಿಯೂ ಬೆಳಗಾವಿ ಭಾಗದಲ್ಲಿ ರಮೇಶ್‌ ಜಾರಕಿಹೊಳಿಗೆ ಸೆಡ್ಡು ಹೊಡೆದು ಕಾಂಗ್ರೆಸ್‌ನಲ್ಲಿ ಗೆದ್ದು ಬಂದಿರುವ ಸವದಿ ಅವರನ್ನು ಕಡೆಗಣಿಸಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗುತ್ತಿದೆ.

ಮಂಗಳೂರು: ರಾಜ್ಯ ಸಚಿವ ಸಂಪುಟ ‌| ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ದಕ್ಕದ ‘ಮಂತ್ರಿ’ ಭಾಗ್ಯ

ಇನ್ನು ಶಾಸಕ ಸವದಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷ್ಮಣ ಸವದಿ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್​ ಹಾಕಿ ಆಕ್ರೋಶ ಹೊರ ಹಾಕಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್​ಗೆ ಹೆಚ್ಚು ಸ್ಥಾನ ಬರಲು ಲಕ್ಷ್ಮಣ ಸವದಿ ಕಾರಣ. ಲಕ್ಷ್ಮಣ ಸವದಿ ಮಂತ್ರಿ ಆಗದಂತೆ ಕೆಲವರು ಕುತಂತ್ರ ನಡೆಸಿದ್ದಾರೆಂದು ಆರೋಪ ಮಾಡಿದ್ದಾರೆ.

Leave A Reply

Your email address will not be published.