ಬೆಂಗಳೂರು: ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಶಾಫಿ ಸಅದಿ ಸೇರಿದಂತೆ ನಾಲ್ವರು ಸದಸ್ಯರ ನಾಮನಿರ್ದೇಶವನ್ನು ರದ್ದು ಮಾಡಿದ್ದ ಆದೇಶವನ್ನು ರಾಜ್ಯ ಸರ್ಕಾರ 2ನೇ ದಿನದಲ್ಲಿ ಹಿಂಪಡೆದುಕೊಂಡಿದೆ.
ಬಿಜೆಪಿ ಅವಧಿಯಲ್ಲಿ ನೇಮಕವಾಗಿದ್ದ ವಕ್ಫ್ ಮಂಡಳಿ ಅಧ್ಯಕ್ಷ ಶಾಫಿ ಸಅದಿ ಸೇರಿದಂತೆ ಸದಸ್ಯರಾದ ಮೀರ್ ಅಝರ್ ಹುಸೈನ್, ಜಿ.ಯಾಕೂಬ್ ಹಾಗೂ ಐಎಎಸ್ ಅಧಿಕಾರಿ ಝೆಹೆರಾ ನಸೀಮ್ ಅವರ ನಾಮ ನಿರ್ದೇಶನವನ್ನು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತ ರದ್ದು ಮಾಡಿತ್ತು.
ಮಂಗಳೂರು: ಅಕ್ರಮ ಮರಳು ಅಡ್ಡೆಗೆ ಪೊಲೀಸ್ ದಾಳಿ- 3.70 ಲಕ್ಷ ರೂ. ಮೌಲ್ಯದ ಸೊತ್ತು ವಶ
ಇನ್ನು ನಾಮನಿರ್ದೇಶವನ್ನು ರದ್ದು ಮಾಡಿದ್ದ ಆದೇಶವನ್ನು ಹಿಂಪಡೆಯಲು ಸಚಿವ ಜಮೀರ್ ಅಹಮದ್ ಖಾನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಡ ಹಾಕಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಸೋಮವಾರ ವಿಧಾನಸೌಧದಲ್ಲಿ ಜಮೀರ್ ಅಹಮದ್ ಅವರನ್ನು ಭೇಟಿ ಮಾಡಿದ್ದ ಶಾಫಿ ಸಅದಿ ಮತ್ತು ಬೆಂಬಲಿಗರು ನಾಮನಿರ್ದೇಶನ ವಾಪಸ್ ಪಡೆಯುವಂತೆ ಒತ್ತಡ ಹಾಕಿದ್ದರು ಎನ್ನಲಾಗಿದೆ.