ಬೆಂಗಳೂರು: ಬೆಂಗಳೂರಿನಲ್ಲಿ ಶ್ರೀಲಂಕಾದ ಮೋಸ್ಟ್ ವಾಂಟೆಡ್ ಮೂವರು ಕ್ರಿಮಿನಲ್‌ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶ್ರೀಲಂಕಾದ ಕಾಸಿನ್ ಕುಮಾರ್, ಅಮಿಲಾ ನುವಾನ್, ರಂಗ ಪ್ರಸಾದ್ ಬಂಧಿತ ಆರೋಪಿಗಳಾಗಿದ್ದು ಇವರಿಗೆ ನಗರದಲ್ಲಿ ಆಶ್ರಯ ನೀಡಿದ್ದ ಜೈ ಪರಮೇಶ್ ಅಲಿಯಾಸ್ ಜಾಕ್‌ನನ್ನು ಬಂಧಿಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಡಾ.ಎಸ್.ಡಿ ಶರಣಪ್ಪ ತಿಳಿಸಿದ್ದಾರೆ. ಜೈ ಪರಮೇಶ್ ಸಹ ಕೊಲೆ ಆರೋಪಿಯಾಗಿದ್ದು ಯಲಹಂಕದ ವಿಶ್ವ ಪ್ರಕೃತಿ ಅಪಾರ್ಟ್ ಮೆಂಟ್ ನಲ್ಲಿ ಮೂವರು ಶ್ರೀಲಂಕಾದ ಪಾತಕಿಗಳಿಗೆ ಆಶ್ರಯ ಕಲ್ಪಿಸಿದ್ದನು. ಇನ್ನು ಕಾಸಿನ್ ಕುಮಾರ್ ವಿರುದ್ಧ ಲಂಕಾದಲ್ಲಿ 4 ಕೊಲೆ ಪ್ರಕರಣಗಳಿದ್ದರೆ, ಮತ್ತೊಬ್ಬ ಅಮಿಲಾ ನುವಾನ್ ಮೇಲೆ 5 ಕೊಲೆ ಪ್ರಕರಣ ಹಾಗೂ ರಂಗ ಪ್ರಸಾದ್ ವಿರುದ್ಧ ಹಲ್ಲೆ, ಕೊಲೆ ಪ್ರಕರಣ ದಾಖಲಾಗಿರುವ ಮಾಹಿತಿಯನ್ನು ಸಿಸಿಬಿ ಪೊಲೀಸರು ಕಲೆಹಾಕಲಾಗಿದ್ದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತರಿಂದ 13 ಮೊಬೈಲ್, ಲಂಕಾದ ವಿವಿಧ ವಿಸಿಟಿಂಗ್ ಕಾರ್ಡ್, ಬಸ್ ಟಿಕೆಟ್, ಪೇಪರ್ ಕಟ್ಟಿಂಗ್ಸ್, ಬಾಡಿಗೆಗಿದ್ದ ಮನೆಯ ಅಗ್ರಿಮೆಂಟ್ ಪ್ರತಿ, ಆಧಾರ್‌ಕಾರ್ಡ್, ಚುನಾವಣಾ ಗುರುತಿನ ಚೀಟಿಯ ಜೆರಾಕ್ಸ್ ಪ್ರತಿಗಳನ್ನು ಜಪ್ತಿ ಮಾಡಲಾಗಿದೆ. ಅರೋಪಿಗಳ ವಿರುದ್ದ ಫಾರಿನ್ ಆಕ್ಟ್ 1947,(ಯುಸಿ-14,14(ಸಿ) ಐಪಿಸಿ ಸೆಕ್ಷನ್ 109, 120ಬಿ, 212ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
[vc_row][vc_column]
BREAKING NEWS
- ವೀರಶೈವ ಲಿಂಗಾಯತರು ಸ್ವಯಂ ಉದ್ಯೋಗ, ಶೈಕ್ಷಣಿಕ, ಕಾರು ಖರೀದಿ ಸಾಲಕ್ಕೆ ಅರ್ಜಿ ಆಹ್ವಾನ.!
- ಕರ್ನಾಟಕ ಡಿ.ಎಸ್.ಟಿ. ಪಿ.ಹೆಚ್.ಡಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ
- ಉದ್ಯಮಶೀಲತಾ ಅಭಿವೃದ್ದಿ ತರಬೇತಿ ಕಾರ್ಯಕ್ರಮ.!
- ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿಗೆ ರಾಷ್ಟ್ರಮಟ್ಟದಲ್ಲಿ 2ನೇ ಬಹುಮಾನ- ಡಿ. ಸುಧಾಕರ್
- ಮಾರಕ ಕಾಯಿಲೆ ಡೆಂಗ್ಯೂ ಬಗ್ಗೆ ಈ ಲಕ್ಷಣಗಳು ಕಂಡುಬಂದರೆ.?
- ಈ ಕಾರಣಕ್ಕೆ ಈ ಪರ್ವತ ಚಾರಣಕ್ಕೆ ನಿಷೇಧ.. !
- ಇಂದು ಮತ್ತೊಮ್ಮೆ ಎಮರ್ಜೆನ್ಸಿ ಅಲರ್ಟ್.. ! ಏನದು.?
- ಪುಷ್ಪಗಳಿಂದ ಶತ್ರುನಾಶ ತಂತ್ರ ಈ ಒಂದೇ ಒಂದು ಪುಷ್ಪದಿಂದ ಎಂತಹ ಶತ್ರು ಇದ್ದರೂ ಕೂಡ ನಾಶ ಮಾಡಿ ನಿಮ್ಮಂತೆ ಶರಣಾಗತಿಯಾಗುವತರ ಮಾಡಬಹುದು!
- — –ದಾಸೋಹದ ಸಂಗಣ್ಣ ಅವರ ವಚನ .!
- ನೇಪಾಳದಲ್ಲಿ ಭೂಕಂಪನ: ದೆಹಲಿ, ಎನ್ ಸಿಆರ್ ನಲ್ಲೂ ಕಂಪಿಸಿದ ಭೂಮಿ