Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

ಬೆಂಗಳೂರು : ಸುಳ್ಳು ಸುದ್ದಿಗೆ ಎಳ್ಳು ನೀರು ಬಿಡಲು ಸರ್ಕಾರ ಸಿದ್ಧ – ಸತ್ಯಶೋಧ ತಂಡ, ದಂಡ ಸೇರಿ ಕಠಿಣ ಶಿಕ್ಷೆ ಜಾರಿಗೆ ಕಾನೂನು ರಚನೆ

0

ಬೆಂಗಳೂರು : ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಗೂ ಸಮಾಜದ ದೃವೀಕರಣಕ್ಕೆ ಸುಳ್ಳು ಸುದ್ದಿಗಳು ಕಾರಣವಾಗಿದ್ದು, ಇದರ ನಿಯಂತ್ರಣ ಅತ್ಯಗತ್ಯ ಎಂದು ಅಭಿಪ್ರಾಯಪಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ‘ಫ್ಯಾಕ್ಟ್ ಚೆಕ್’ ಘಟಕ ಸ್ಥಾಪನೆ ಸೇರಿದಂತೆ ಅಗತ್ಯ ಇರುವ ಎಲ್ಲಾ ನಿಯಮ ಮತ್ತು ಕಾನೂನು ರೂಪಿಸುವ ಪ್ರಯತ್ನಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸೈಬರ್ ಸುರಕ್ಷತೆಗೆ ಸಂಬಂಧಿಸಿದಂತೆ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸುಳ್ಳು ಸುದ್ದಿಗಳು ಮತ್ತು ಸುಳ್ಳು ಸುದ್ದಿ ಸೃಷ್ಟಿಸುವ ಸಿಂಡಿಕೇಟ್‌ಗಳ ಪತ್ತೆ, ಸುಳ್ಳು ಸುದ್ದಿ ಪ್ರಸಾರಕ್ಕೆ ತಡೆ, ಸುಳ್ಳು ಸುದ್ದಿ ಕರ್ತೃ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವ ಮೂರು ಹಂತಗಳ ಕ್ರಮಕ್ಕೆ ಅನುಮೋದನೆ ನೀಡಲಾಗಿದೆ ಎಂದರು. “ಪ್ಯಾಕ್ಟ್ ಚೆಕ್ ಘಟಕ” ಸತ್ಯ ಶೋಧ ತಂಡ, ಮೇಲುಸ್ತುವಾರಿ ಸಮಿತಿ, SOPC ಪರಿಶೀಲನೆ, ನೋಡಲ್ ಅಧಿಕಾರಿಗಳ ನೇಮಕ ಸೇರಿದಂತೆ ಸತ್ಯ ತಪಾಸಣೆ ತಂಡ ವಿಶ್ಲೇಷಣ ತಂಡವನ್ನು ಒಳಗೊಳ್ಳಲಿದೆ. ಸಾಮರ್ಥ್ಯ ವರ್ಧನೆ ತಂಡ ರಚನೆ ಮಾಡಿ ವ್ಯವಸ್ಥಿತವಾಗಿ ತಂತ್ರಜ್ಞಾನ ಬಳಕೆ ಮಾಡಬಹುದು ಎಂದು ಸಭೆಯಲ್ಲಿ ಚರ್ಚಿಸಲಾಗಿದ್ದು, ಸುಳ್ಳು ಸುದ್ದಿ ಗುರುತಿಸುವುದು, ಕಾನೂನು ಸುವ್ಯವಸ್ಥೆ ಕಾಪಾಡಲು ಇದು ಅತ್ಯಗತ್ಯ ಎಂದು ಸಿಎಂ ತಿಳಿಸಿದರು. ಇದಕ್ಕೂ ಮುನ್ನ ನಡೆದ ಫ್ಯಾಕ್ಟ್ ಚೆಕ್ ಸಭೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪ್ರಿಯಾಂಕ್ ಖರ್ಗೆ, ಕೃಷ್ಣ ಬೈರೇಗೌಡ ಪಾಲ್ಗೊಂಡಿದ್ದರು. ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ: ರಜನೀಶ್ ಗೋಯಲ್, ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕ ರ್ ಉಪಸ್ಥಿತರಿದ್ದರು.

Leave A Reply

Your email address will not be published.