Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಬೆಂಗಳೂರು: ಹಿಂದಿನ ಸರ್ಕಾರ ಬೊಕ್ಕಸ ಬರಿದು ಮಾಡಿ ಹೋಗಿದೆ-ಡಿ.ಕೆ.ಶಿವಕುಮಾರ್

0

ಬೆಂಗಳೂರು: ಈ ಹಿಂದಿನ ಬಿಜೆಪಿ ಸರ್ಕಾರ, ರಾಜ್ಯವನ್ನು ಆರ್ಥಿಕ ದಿವಾಳಿತನಕ್ಕೆ ದೂಡಿ ಹೋಗಿದೆ. ರಾಜ್ಯದ ಬೊಕ್ಕಸವನ್ನು ಬರಿದು ಮಾಡಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆರೋಪಿಸಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಯುವ ಕಾಂಗ್ರೆಸ್ ರಾಷ್ಟ್ರೀಯ ಸಮಾವೇಶದಲ್ಲಿ ಪಾಲ್ಗೊಂಡು ಬಳಿಕ ಮಾತನಾಡಿದ ಅವರು, ಈ ಹಿಂದಿನ ಬೊಮ್ಮಾಯಿ ಸರ್ಕಾರ ಹಲವು ಅಮಾಯಕರ ಮೇಲೆ ಪ್ರಕರಣ ದಾಖಲಿಸಿದೆ ಎಂದರು. ಇನ್ನು, 20 ಮಂದಿ ಸ್ವಪಕ್ಷೀಯ ಶಾಸಕರು ತಮ್ಮ ಸಚಿವರು ಕೆಲಸ ಮಾಡಿ ಕೊಡುತ್ತಿಲ್ಲವೆಂದು ಆರೋಪಿಸಿ ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿದ್ದಾರೆ ಎನ್ನುವುದು ಸುಳ್ಳು ಅಂತಾನೂ ಡಿಸಿಎಂ ಡಿ.ಕೆ.ಶಿವಕುಮಾರ್ ಪುನರುಚ್ಚರಿಸಿದರು.

Leave A Reply

Your email address will not be published.