ಬೆಂಗಳೂರು: MLC ಟಿಕೆಟ್ಗಾಗಿ ದುಡ್ಡು ಪಡೆದು ವಂಚನೆ ಮಾಡಿದ್ದ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸಹೋದರ ಗೋಪಾಲ್ ಜೋಶಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಗೋಪಾಲ್ ಜೋಶಿ ಆಪ್ತರ ಮನೆಯಲ್ಲಿ ತಲೆಮರೆಸಿಕೊಂಡಿದ್ದರು. ಅವರನ್ನು ಬೆಂಗಳೂರಿನ ಬಸವೇಶ್ವರ ನಗರ ಪೊಲೀಸರು ಬೆಳಗಾವಿ ಬಳಿ ಬಂಧಿಸಿದ್ದಾರೆ. ಇದೇ ವೇಳೆ ಸಹೋದರಿ ವಿಜಯಲಕ್ಷ್ಮಿಯನ್ನ ಪೊಲೀಸ್ರು ವಶಕ್ಕೆ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
