ಏಷ್ಯಾಕಪ್ 2023ರ ಟೂರ್ನಿಯ ಭಾಗವಾಗಿ ಇಂದು ಶ್ರೀಲಂಕಾದ ಪಲ್ಲಕೆಲೆ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತವು ನೇಪಾಳ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಭಾರತದ ಪಾಲಿಗೆ ಮಹತ್ವದ್ದಾಗಿದೆ. ವಿಶೇಷ ಎಂದರೆ ಉಭಯ ತಂಡಗಳಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಅಲ್ಲದೆ ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಇಂಡೋ-ನೇಪಾಳ್ ಮುಖಾಮುಖಿ ಆಗುತ್ತಿರುವುದು ಇದೇ ಮೊದಲ ಬಾರಿ. ಪಾಕಿಸ್ತಾನ ವಿರುದ್ಧದ ಪಂದ್ಯ ರದ್ದಾದ ಪರಿಣಾಮ ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲ್ಲಲೇ ಬೇಕಿದೆ. ಅತ್ತ ನೇಪಾಳ ಕೂಡ ಪಾಕ್ ವಿರುದ್ಧ ಸೋತಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆದ್ದ ತಂಡ ಸೂಪರ್-4 ಹಂತಕ್ಕೆ ತೇರ್ಗಡೆಯಾದರೆ, ಸೋತ ತಂಡ ಟೂರ್ನಿಯಿಂದ ಹೊರಬೀಳಲಿದೆ.
![](https://bcsuddi.com/wp-content/uploads/2025/01/WhatsApp-Image-2025-01-13-at-6.15.20-PM.jpeg)