ನವದೆಹಲಿ : ಭಾರತದಲ್ಲೇ ಪ್ರತ್ಯೇಕ ಮುಸ್ಲಿಂ ರಾಜ್ಯ ಸ್ಥಾಪನೆ ಉದ್ದೇಶ ಹೊಂದಿದ್ದ 14 ಜನರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ ಖೈದಾ ಪ್ರೇರಿತ ಭಯೋತ್ಪಾದನಾ ಘಟಕವನ್ನು ಭೇದಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
ಜಾರ್ಖಂಡ್, ರಾಜಸ್ಥಾನ ಮತ್ತು ಉತ್ತರ ಪ್ರದೇಶದ 14 ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಗುಪ್ತಚರ ಮಾಹಿತಿ ಪಡೆದ ನಂತರ, ವಿವಿಧ ರಾಜ್ಯಗಳ ಪೊಲೀಸ್ ಪಡೆಗಳೊಂದಿಗೆ ಕಾರ್ಯಾಚರಣೆ ನಡೆಸಲಾಯಿತು. ಭೇದಿಸಲಾದ ಮಾಡ್ಯೂಲ್ಗೆ ಜಾರ್ಖಂಡ್ನ ರಾಂಚಿಯ ಡಾ। ಇಶ್ತಿಯಾಕ್ ಎಂಬಾತ ನೇತೃತ್ವ ವಹಿಸಿದ್ದ, ಇದು ‘ಖಿಲಾಫತ್’ ಅಂದರೆ ಬಂಡಾಯ ಸಾರಿ ಭಾರತದಲ್ಲೇ ಪ್ರತ್ಯೇಕ ಮುಸ್ಲಿಂ ರಾಜ್ಯ ಘೋಷಿಸಲು ಮತ್ತು ದೇಶದೊಳಗೆ ಗಂಭೀರ ಭಯೋತ್ಪಾದಕ ಚಟುವಟಿಕೆಗಳನ್ನು ಕಾರ್ಯಗತಗೊಳಿಸುವ ಉದ್ದೇಶ ಹೊಂದಿದ್ದ ಗುಂಪು ಎಂದು ದಿಲ್ಲಿ ಪೊಲೀಸರು ಹೇಳಿದ್ದಾರೆ.
ಸಂಘಟನೆಯ ಸದಸ್ಯರಿಗೆ ಶಸ್ತ್ರಾಸ್ತ್ರಗಳನ್ನು ನಿರ್ವಹಿಸುವುದು ಸೇರಿದಂತೆ ವಿವಿಧ ಉಗ್ರ ಚಟುವಟಿಕೆಯ ತರಬೇತಿ ನೀಡಲಾಗುತ್ತಿತ್ತು ಎಂದೂ ಅವರು ತಿಳಿಸಿದ್ದಾರೆ. ಇನ್ನೂ ಹಲವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಪೊಲೀಸರು ಹೇಳಿದ್ದಾರೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ
 
				 
         
         
         
															 
                     
                     
                     
                     
                    


































 
    
    
        