ನವದೆಹಲಿ: ಒಲಿಂಪಿಕ್ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಶನಿವಾರ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ಗೆ ಸೇರ್ಪಡೆಯಾದರು.ಹರಿಯಾಣ ವಿಧಾನಸಭಾ ಚುನಾವಣೆಗೆ ಮೊದಲೇ ರಾಜೀನಾಮೆ ಕಾಂಗ್ರೆಸ್ ಸೇರಿದ್ದಾರೆ.
ಇಬ್ಬರು ಕುಸ್ತಿಪಟುಗಳು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ದೆಹಲಿಯ ನಿವಾಸಕ್ಕೆ ಆಗಮಿಸಿ ಬಳಿಕ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸೆ.4 ರಂದು ನವದೆಹಲಿಯಲ್ಲಿ ಇತ್ತೀಚೆಗೆ ಭೇಟಿಯಾದ ನಂತರ ಈ ಬೆಳವಣಿಗೆ ನಡೆದಿದೆ. ಅವರ ರಾಜಕೀಯದ ಬಗ್ಗೆ ಊಹಾಪೋಹಗಳಿಗೆ ಈ ಮೂಲಕ ಕೊನೆಗೂ ತೆರೆಬಿದ್ದಿದೆ. ಪಕ್ಷ ಸೇರ್ಪಡೆಗೂ ಮುನ್ನ ವಿನೇಶ್ ಫೋಗಟ್ ಭಾರತೀಯ ರೈಲ್ವೆಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.